ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ಏರಿಕೆಯ ಹೊಸ ಅಲೆ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಿನ್ನೆ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರವು ಸಶಸ್ತ್ರ ಪೊಲೀಸ್ ಪಡೆಗಳಿಂದ (ಸಿಎಪಿಎಫ್) ಹೆಚ್ಚುವರಿ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಯನ್ನು ಮತ್ತು ಹೆಚ್ಚುವರಿ ವೈದ್ಯಕೀಯ ಉಪಕರಣಗಳನ್ನು ದೆಹಲಿಗೆ ಕರೆಸಿಕೊಳ್ಳುವ ಭರವಸೆಯನ್ನು ಶಾ ಅವರು ನೀಡಿದ್ದಾರೆ. ಇದರಿಂದ ದೆಹಲಿಯ ತೀವ್ರ ಪ್ರಕರಣಗಳನ್ನು ನಿಭಾಯಿಸಲು ಸಾಧ್ಯವಾಗಲಿದೆ.
ಆರ್ಟಿ-ಪಿಸಿಆರ್ ಪರೀಕ್ಷಾ ಸಾಮರ್ಥ್ಯವನ್ನು ದ್ವಿಗುಣಗೊಳಿಸಲು ಕೂಡ ನಿರ್ಧರಿಸಲಾಗಿದೆ. ಅಲ್ಲದೇ, ದೆಹಲಿಯಲ್ಲಿ 300 ಹೆಚ್ಚುವರಿ ಮೀಸಲು ಕೋವಿಡ್ ಐಸಿಯು ಹಾಸಿಗೆಗಳನ್ನು ಒದಗಿಸಲು ಶಾ ನಿರ್ಧರಿಸಿದ್ದಾರೆ. ದೆಹಲಿಗೆ ಸಾಕಷ್ಟು ಸಂಖ್ಯೆಯ BIPAP ಯಂತ್ರಗಳು ಮತ್ತು ಹೆಚ್ಚಿನ ಹರಿವಿನ ಮೂಗಿನ ಕ್ಯಾನುಲಾಗಳನ್ನು 48 ಗಂಟೆಗಳ ಒಳಗೆ ಒದಗಿಸುವಂತೆ ಅವರು ನಿರ್ದೇಶನಗಳನ್ನು ನೀಡಿದ್ದಾರೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.