ಚೆನ್ನೈ: ತಮಿಳುನಾಡಿನ ಮಾಜಿ ಸಿಎಂ ಮತ್ತು ದಿವಂಗತ ಕರುಣಾನಿಧಿ ಅವರ ಪುತ್ರ ಎಂ.ಕೆ ಅಳಗಿರಿ ಅವರು ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಹೊಸ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
2021ರಲ್ಲಿ ತಮಿಳುನಾಡಿನಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ. ಇದಕ್ಕೂ ಮುನ್ನ ಅಳಗಿರಿಯ ನೂತನ ಪಕ್ಷ ಸ್ಥಾಪನೆಗೊಳ್ಳುವ ನಿರೀಕ್ಷೆ ಇದೆ ಎನ್ನಲಾಗಿದೆ.
ಇನ್ನೊಂದೆಡೆ ಅಳಗಿರಿ ಬಿಜೆಪಿ ಸೇರುತ್ತಾರೆ ಎಂಬ ವದಂತಿಗಳು ಎಬ್ಬಿದ್ದವು, ಆದರೀಗ ವದಂತಿಗೆ ತೆರೆ ಬಿದ್ದಿದೆ.
“ಬೆಂಬಲಿಗರೊಂದಿಗೆ ನಾನು ಮಾತುಕತೆ ನಡೆಸುತ್ತಿದ್ದೇನೆ. ಪ್ರತ್ಯೇಕ ಪಕ್ಷವನ್ನು ಸ್ಥಾಪನೆ ಮಾಡಬೇಕು ಅಥವಾ ಬೇರೆ ಯಾವುದಾದರೂ ಪಕ್ಷವನ್ನು ಬೆಂಬಲಿಸಬೇಕೇ ಎಂಬುದರ ಕುರಿತು ಚರ್ಚೆ ನಡೆಯುತ್ತಿದೆ. ಬಿಜೆಪಿ ಸೇರುವ ವದಂತಿ ಕಟ್ಟುಕತೆ. ಈ ಬಗ್ಗೆ ಬಿಜೆಪಿ ಅವರು ನನ್ನೊಂದಿಗೆ ಚರ್ಚೆ ನಡೆಸಿಲ್ಲ” ಎಂದು ಅಳಗಿರಿ ಹೇಳಿದ್ದಾರೆ.
ಮೂಲಗಳ ಪ್ರಕಾರ ಅಳಗಿರಿ ಸ್ಥಾಪನೆ ಮಾಡುವ ಹೊಸ ಪಕ್ಷ ‘ಕಲೈನರ್ ಡಿಎಂಕೆ’ ಅಥವಾ ‘ಕೆಡಿಎಂಕೆ’ ಆಗಿರಲಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.