ಬೆಂಗಳೂರು: ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 15 ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮೋಡ ಕವಿದ ವಾತಾವರಣ, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರುಗಳಲ್ಲಿ ಸಾಧಾರಣ ಮಳೆ ಬೀಳುವ ಸೂಚನೆಯನ್ನು ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.