ನವದೆಹಲಿ: ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್ಯು)ವನ್ನು ಸ್ವಾಮಿ ವಿವೇಕಾನಂದರ ಹೆಸರಿನಿಂದ ಮರುನಾಮಕರಣ ಮಾಡಬೇಕೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಮಾಜಿ ಸಚಿವ ಸಿ.ಟಿ.ರವಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಪ್ರಸ್ತಾಪಿಸಿದ್ದಾರೆ.
ಜೆಎನ್ಯುಗೆ ವಿವೇಕಾನಂದರ ಹೆಸರು ಇಡುವುದರಿಂದ ಮುಂಬರುವ ಪೀಳಿಗೆಗಳು ವಿವೇಕಾನಂದರ ಜೀವನ ಮತ್ತು ದೃಷ್ಟಿಕೋನಗಳಿಂದ ಪ್ರೇರಿತರಾಗುತ್ತಾರೆ ಎಂದು ಸಿ.ಟಿ ರವಿ ಹೇಳಿದ್ದಾರೆ.
“ಐಡಿಯಾ ಆಫ್ ಭಾರತ್” ಗಾಗಿ ಸ್ವಾಮಿ ವಿವೇಕಾನಂದರು ಎದ್ದು ನಿಂತರು. ಅವರ ತತ್ವಶಾಸ್ತ್ರ ಮತ್ತು ಮೌಲ್ಯಗಳು ಭಾರತದ ಸಾಮರ್ಥ್ಯವನ್ನು ಸೂಚಿಸುತ್ತವೆ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯವನ್ನು ಸ್ವಾಮಿ ವಿವೇಕಾನಂದ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವುದು ಸರಿಯಾದ ಕಾರ್ಯ. ಭಾರತದ ದೇಶಭಕ್ತ ಸಂತನ ಜೀವನವು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ” ಎಂದಿದ್ದಾರೆ.
ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಜೆಎನ್ಯು ಆವರಣದಲ್ಲಿ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಅನಾವರಣಗೊಳಿಸಿದರು.
It is Swami Vivekananda who stood for the “Idea of Bharat”. His philosophy & values signify the “Strength of Bharat”.
It is only right that Jawaharlal Nehru University be renamed as Swami Vivekananda University.
Life of Bharat’s patriotic Saint will inspire generations to come.
— C T Ravi 🇮🇳 ಸಿ ಟಿ ರವಿ (@CTRavi_BJP) November 16, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.