ಬೆಂಗಳೂರು: ರಾಜ್ಯದಲ್ಲಿ ವೀರಶೈವರು, ಲಿಂಗಾಯುತರ ಅಭಿವೃದ್ಧಿಗಾಗಿ, ‘ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಆದೇಶ ನೀಡಿದ್ದಾರೆ.
ರಾಜ್ಯದಲ್ಲಿ ಈ ಎರಡು ಸಮುದಾಯಗಳ ಜನರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮೇಲ್ಸ್ತರಕ್ಕೇರಿಸುವ ಉದ್ದೇಶದಿಂದ ನಿಗಮ ಸ್ಥಾಪಿಸಲು ಮುಂದಾಗಿರುವುದಾಗಿ ಮೂಲಗಳು ಮಾಹಿತಿ ನೀಡಿವೆ. ತಕ್ಷಣದಿಂದಲೇ ಜಾರಿಯಾಗುವಂತೆ ಈ ಆದೇಶವನ್ನು ಜಾರಿಗೊಳಿಸಲು ಯಡಿಯೂರಪ್ಪ ಸೂಚನೆ ನೀಡಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ.
ಪಕ್ಷಾತೀತವಾಗಿ ಈ ನಿಗಮ ಸ್ಥಾಪನೆಗೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮಾಜಿ ಗೃಹ ಸಚಿವ ಎಂ.ಬಿ ಪಾಟೀಲ್ ಸಹ ಸಿಎಂ ಗೆ ಪತ್ರ ಬರೆದು ಮನವಿ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.