ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಮುಚ್ಚಲಾಗಿದ್ದ ಕಾಲೇಜುಗಳು ಇಂದು ಪುನರಾರಂಭವಾಗಿವೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಮಾರ್ಗಸೂಚಿಯಂತೆ ಪದವಿ, ಸ್ನಾತಕೋತ್ತರ ಮತ್ತು ಡಿಪ್ಲೊಮಾ ಕಾಲೇಜುಗಳು ಇಂದಿನಿಂದ ಮತ್ತೆ ಆರಂಭವಾಗಿವೆ.
ಬೆಂಗಳೂರು ನಗರದಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ. ಇದಕ್ಕಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಗಂಟಲುದ್ರವ ಮಾದರಿ ಪರೀಕ್ಷೆಯ 432 ತಂಡಗಳನ್ನು ಕಾಲೇಜುಗಳ ಬಳಿ ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೊರೋನಾ ಹಿನ್ನೆಲೆಯಲ್ಲಿ ಕಾಲೇಜುಗಳ ಕ್ಯಾಂಟೀನ್ ಮತ್ತು ಗ್ರಂಥಾಲಯಗಳನ್ನು ಮುಚ್ಚಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ|| ವೇಣುಗೋಪಾಲ್ ತಿಳಿಸಿದ್ದಾರೆ.
ಕಾಲೇಜುಗಳಿಗೆ ಹಾಜರಾಗುವ ಪ್ರತಿಯೋರ್ವ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಕೊರೋನಾ ಪರೀಕ್ಷೆ ಮಾಡಿಸಿಕೊಂಡು ನೆಗೆಟಿವ್ ಪ್ರಮಾಣ ಪತ್ರ ತರುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ಎಂದಿನಂತೆ ಮುಂದುವರೆಯಲಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾಲೇಜಿನ ಕಟ್ಟಡ, ಶೌಚಾಲಯ ಮತ್ತು ಪೀಠೋಪಕರಣಗಳನ್ನು ಸ್ಯಾನಿಟೈಸ್ ಮಾಡಲಾಗಿದೆ.
ಇನ್ನು ಈ ಸಂಬಂಧ.ಆರೋಗ್ಯ ಸಚಿವ ಡಾ|| ಕೆ. ಸುಧಾಕರ್ ಟ್ವೀಟ್ ಮಾಡಿದ್ದು, ಇಂದಿನಿಂದ ಕಾಲೇಜುಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ವರ್ಗ ಮತ್ತು ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು, ಮಾಸ್ಕ್ ಧಾರಣೆ, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಮನವಿ ಮಾಡುತ್ತೇನೆ. ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಲು ಮರೆಯದಿರಿ. ಆತಂಕ ಬೇಡ, ಆದರೆ ಎಚ್ಚರಿಕೆ ಇರಲಿ. All the best!
— Dr Sudhakar K (@mla_sudhakar) November 17, 2020
ಉನ್ನತ ಶಿಕ್ಷಣ ಸಚಿವರು ಆಗಿರುವ ಉಪಮುಖ್ಯಮಂತ್ರಿ ಡಾ ಸಿ.ಎನ್ ಅಶ್ವತ್ಥ ನಾರಾಯಣ್ ಅವರು ಇಂದು ಬೆಂಗಳೂರಿನ ಹಲವು ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.