ಬೆಂಗಳೂರು: ಕೊರೋನಾ ಸೋಂಕಿನಿಂದ ಮೃತಪಟ್ಟ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ಅವರ ಮರಣಾನಂತರ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಡಿ. 1 ರಂದು ಚುನಾವಣೆ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಇಂದು ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಈ ಬಾರಿ ಮಂಗಳೂರು ಮೂಲದ ಡಾ ಕೆ.ನಾರಾಯಣ (ಸ್ಪ್ಯಾನ್ ಪ್ರಿಂಟ್) ಅವರನ್ನು ರಾಜ್ಯ ಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಘೋಷಿಸಿದೆ.
ಈ ಬಾರಿಯೂ ಬಿಜೆಪಿ ಅಭ್ಯರ್ಥಿ ಆಯ್ಕೆಯ ಸಂದರ್ಭ ಕಾರ್ಯಕರ್ತರಿಗೆ ಆದ್ಯತೆ ನೀಡಿದ್ದು, ಆ ಮೂಲಕ ಬಿಜೆಪಿ ಕಾರ್ಯಕರ್ತರ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತು ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.