ಬೆಂಗಳೂರು: ಕೌನ್ಸೆಲಿಂಗ್ ಮೂಲಕ ಈಗಾಗಲೇ ಸ್ಥಳ ನಿಯುಕ್ತಿಗೊಂಡಿರುವ ನೂತನ ಪದವಿ ಪೂರ್ವ ಉಪನ್ಯಾಸಕರಿಗೆ ನ. 20ರ ಬಳಿಕ ನೇಮಕಾತಿ ಆದೇಶ ಪ್ರತಿಗಳನ್ನು ನೀಡಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಸಂಬಂಧ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದು, ನ. 20 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಂಕೇತಿಕವಾಗಿ ನೇಮಕಾತಿ ಆದೇಶವನ್ನು ನೀಡಲಿದ್ದಾರೆ. ಕಾಲೇಜುಗಳನ್ನು ಆರಂಭಿಸಿದ ಬಳಿಕ ಆ ಆದೇಶ ಜಾರಿಗೊಳ್ಳಲಿದೆ. ಅದಕ್ಕೂ ಪೂರ್ವದಲ್ಲಿ ಹೊಸ ಉಪನ್ಯಾಸಕರಿಗೆ ಇಲಾಖೆಯ ನೀತಿ ನಿಯಮಗಳು, ತರಬೇತಿ ಕಾರ್ಯಾಗಾರಗಳನ್ನು ಆಯಾ ಜಿಲ್ಲೆ ಅಥವಾ ವಿಭಾಗಗಳಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಕೊರೋನಾ ಸಂಕಷ್ಟ, ಶಾಲಾ ಕಾಲೇಜುಗಳ ಆರಂಭಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ ಇದ್ದುದರಿಂದ ಈ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿದೆ. ಪ್ರಸ್ತುತ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಕೌನ್ಸೆಲಿಂಗ್ ನಡೆಸಿ ಸ್ಥಳ ನಿಯುಕ್ತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ. ಜೊತೆಗೆ ನ. 23 ರಿಂದ ತೊಡಗಿದಂತೆ ಪಿಯು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಅಂದಿನಿಂದಲೇ ಅರ್ಜಿ ಸಲ್ಲಿಕೆಗೂ ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.