ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು 12 ನೇ ಬ್ರಿಕ್ಸ್ ಶೃಂಗಸಭೆಯಲ್ಲಿವರ್ಚುವಲ್ ಆಗಿ ಭಾಗವಹಿಸಿ, ಭಯೋತ್ಪಾದನೆ ಇಂದು ಜಗತ್ತು ಎದುರಿಸುತ್ತಿರುವ ದೊಡ್ಡ ಸಮಸ್ಯೆಯಾಗಿದೆ ಮತ್ತು ಭಯೋತ್ಪಾದಕರನ್ನು ಬೆಂಬಲಿಸುವ ದೇಶಗಳನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಪಾದಿಸಿದರು.
“ಇಂದು ಜಗತ್ತು ಎದುರಿಸುತ್ತಿರುವ ಅತಿದೊಡ್ಡ ಸಮಸ್ಯೆ ಭಯೋತ್ಪಾದನೆ. ಭಯೋತ್ಪಾದಕರನ್ನು ಬೆಂಬಲಿಸುವ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕೆಂಬುದನ್ನು ನಾವು ಖಚಿತಪಡಿಸಿಕೊಳ್ಳಬೇಕು ಮತ್ತು ಈ ಸಮಸ್ಯೆಯನ್ನು ಸಂಘಟಿತ ರೀತಿಯಲ್ಲಿ ನಿಭಾಯಿಸಬೇಕು” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
2021 ರಲ್ಲಿ ಬ್ರಿಕ್ಸ್ 15 ವರ್ಷಗಳನ್ನು ಪೂರ್ಣಗೊಳಿಸಲಿದೆ ಮತ್ತು ಕಳೆದ ವರ್ಷಗಳಲ್ಲಿ ತೆಗೆದುಕೊಂಡ ವಿವಿಧ ನಿರ್ಧಾರಗಳನ್ನು ಮೌಲ್ಯಮಾಪನ ಮಾಡಲು ಶೆರ್ಪಾ ವರದಿಯನ್ನು ತಯಾರಿಸಬಹುದು ಎಂದು ಪಿಎಂ ಮೋದಿ ಹೇಳಿದ್ದಾರೆ.
ಪೂರ್ವ ಲಡಾಕ್ನಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ ಪ್ರಧಾನಿ ಅವರು ಇಂದು ವರ್ಚುವಲ್ ರೀತಿಯಲ್ಲಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡರು.
ಈ ವರ್ಷ, ಬ್ರಿಕ್ಸ್ ಶೃಂಗಸಭೆಯನ್ನು ರಷ್ಯಾ ಆಯೋಜಿಸಿದೆ ಮತ್ತು 2021 ರಲ್ಲಿ ಭಾರತವು ಅದರ ಅಧ್ಯಕ್ಷನಾಗಿ ಆತಿಥೇಯನಾಗಲಿದೆ. ಭಾರತವು ಈ ಹಿಂದೆ 2012 ಮತ್ತು 2016 ರಲ್ಲಿ ಬ್ರಿಕ್ಸ್ ಅಧ್ಯಕ್ಷನಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.