ನವದೆಹಲಿ: ಅಮೆರಿಕಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಜೋ ಬೈಡನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ರಾತ್ರಿ ದೂರವಾಣಿ ಮೂಲಕ ಸಂಭಾಷಣೆ ನಡೆಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಅಮೆರಿಕಾ ಚುನಾವಣೆಯ ಫಲಿತಾಂಶ ಘೋಷಣೆಯಾದ ಬಳಿಕ ಉಭಯ ನಾಯಕರ ನಡುವೆ ನಡೆಯುತ್ತಿರುವ ಮೊದಲ ಮಾತುಕತೆ ಇದಾಗಿದೆ.
ಪ್ರಧಾನಿ ಮೋದಿ ಅವರು ಈ ವೇಳೆ ಬೈಡನ್ ಮತ್ತು ಕಮಲಾ ಹ್ಯಾರಿಸ್ ಅವರನ್ನು ಅಭಿನಂದಿಸಿದರು ಮತ್ತು ಇಂಡೋ-ಯುಎಸ್ ಕಾರ್ಯತಂತ್ರದ ಸಹಭಾಗಿತ್ವಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು ಮತ್ತು ಉಭಯ ದೇಶಗಳ ಹಂಚಿಕೆಯ ಆದ್ಯತೆಗಳು ಮತ್ತು ಕಾಳಜಿಗಳ ಬಗ್ಗೆ ಚರ್ಚಿಸಿದರು.
ಈ ಬಗ್ಗೆ ಟ್ವಿಟ್ ಮಾಡಿರುವ ಮೋದಿ, “ಯುಎಸ್ ಅಧ್ಯಕ್ಷರಾಗಿ ಚುನಾಯಿತರಾದ ಜೋ ಬೈಡೆನ್ ಅವರನ್ನು ಅಭಿನಂದಿಸಲು ಫೋನ್ನ ಮೂಲಕ ಮಾತನಾಡಿದೆ. ಇಂಡೋ-ಯುಎಸ್ ಕಾರ್ಯತಂತ್ರದ ಸಹಭಾಗಿತ್ವಕ್ಕೆ ನಮ್ಮ ದೃಢವಾದ ಬದ್ಧತೆಯನ್ನು ನಾವು ಪುನರುಚ್ಚರಿಸಿದ್ದೇವೆ ಮತ್ತು ನಮ್ಮ ಹಂಚಿಕೆಯ ಆದ್ಯತೆಗಳು ಮತ್ತು ಕಾಳಜಿಗಳನ್ನು ಚರ್ಚಿಸಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ, ಹವಾಮಾನ ಬದಲಾವಣೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿನ ಸಹಕಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ” ಎಂದಿದ್ದಾರೆ.
ಇದಲ್ಲದೆ, ಕಮಲಾ ಹ್ಯಾರಿಸ್ ಅವರ ಗೆಲುವು ಭಾರತೀಯ-ಅಮೇರಿಕನ್ ಸಮುದಾಯಕ್ಕೆ ಬಹಳ ಹೆಮ್ಮೆ ಮತ್ತು ಮಹತ್ವಾಕಾಂಕ್ಷೆಯ ವಿಷಯವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
“ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಕಮಲಾ ಹ್ಯಾರಿಸ್ ಅವರಿಗೆ ನಾನು ಆತ್ಮೀಯ ಅಭಿನಂದನೆಗಳನ್ನು ತಿಳಿಸಿದೆ. ಅವರ ಯಶಸ್ಸು ಇಂಡೋ-ಯುಎಸ್ ಸಂಬಂಧಗಳಿಗೆ ಅಪಾರ ಶಕ್ತಿಯ ಮೂಲವಾಗಿರುವ ಭಾರತೀಯ-ಅಮೇರಿಕನ್ ಸಮುದಾಯದ ಸದಸ್ಯರಿಗೆ ಬಹಳ ಹೆಮ್ಮೆ ಮತ್ತು ಪ್ರೇರಣೆಯಾಗಿದೆ” ಎಂದು ಪ್ರಧಾನಿ ಹೇಳಿದ್ದಾರೆ.
Spoke to US President-elect @JoeBiden on phone to congratulate him. We reiterated our firm commitment to the Indo-US strategic partnership and discussed our shared priorities and concerns – Covid-19 pandemic, climate change, and cooperation in the Indo-Pacific Region.
— Narendra Modi (@narendramodi) November 17, 2020
I also conveyed warm congratulations for VP-elect @KamalaHarris. Her success is a matter of great pride and inspiration for members of the vibrant Indian-American community, who are a tremendous source of strength for Indo-US relations.
— Narendra Modi (@narendramodi) November 17, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.