ಬೆಂಗಳೂರು: ಕೊರೋನಾ ಸಂಕಷ್ಟ ಮುಂದಿನ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ಹೆಚ್ಚುವ ಸಾಧ್ಯತೆ ಇದೆ ಎಂದು ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್ ಮಂಜುನಾಥ್ ತಿಳಿಸಿದ್ದಾರೆ.
ಇವರು ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆ ಜಿಲ್ಲೆ-312 ಎಫ್ ಕರ್ನಾಟಕ ಮಾಧ್ಯಮ ಅಕಾಡೆಮಿ, ಭಾರತೀಯ ವಿದ್ಯಾಭವನ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಪತ್ರಿಕೋದ್ಯಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
2021ರ ಫೆಬ್ರವರಿ, ಮಾರ್ಚ್ ತಿಂಗಳಿನಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಬೀಸುವ ಸಾಧ್ಯತೆ ಇದೆ. ಎಚ್ಚರ ವಹಿಸುವಂತೆ ಅವರು ಸೂಚಿಸಿದ್ದಾರೆ. ಜೊತೆಗೆ ಕೊರೋನಾ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಗಳನ್ನು ಮಾಧ್ಯಮಗಳು ಮಾಡಬೇಕು ಎಂದು ತಿಳಿಸಿದರು. ನಮ್ಮ ಎಚ್ಚರಿಕೆಯಲ್ಲಿ ನಾವಿದ್ದರಷ್ಟೇ ಕೊರೋನಾದಿಂದ ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ಸದ್ಯದ ಮಟ್ಟಿಗೆ ಕೊರೋನಾ ತೀವ್ರತೆ ರಾಜ್ಯದಲ್ಲಿ ಕೊಂಚ ಮಟ್ಟಿಗೆ ಇಳಿಮುಖವಾಗಿದೆ. ಆದರೂ ಜನರು ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿದರಷ್ಟೇ ಕೊರೋನಾ ನಿಯಂತ್ರಣ ಸಾಧ್ಯ. ಎಚ್ಚರಿಕೆ ಮರೆತಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಮಂಜುನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.