ಬೆಂಗಳೂರು: ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕೆ ಡಿ. 1 ರಂದು ಉಪ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಕೆ ನಾರಾಯಣ್ ಅವರು ಇಂದು ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಆರೆಸ್ಸೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರಾಗಿದ್ದ ನಾರಾಯಣ್ ಅವರನ್ನು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ಅಭ್ಯರ್ಥಿಯನ್ನಾಗಿ ಬಿಜೆಪಿ ನಿನ್ನೆಯಷ್ಟೇ ಘೋಷಣೆ ಮಾಡಿತ್ತು.
ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಈಶ್ವರಪ್ಪ, ಡಾ ಕೆ ಸಿ ನಾರಾಯಣ್ ಗೌಡ ಉಪಸ್ಥಿತರಿದ್ದರು. ನಾರಾಯಣ್ ಅವರು ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.