ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭವಾದ ಬೆನ್ನಲ್ಲೇ ಕೆಎಸ್ಆರ್ಟಿಸಿ, ಬಿಎಂಟಿಸಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಒಳ್ಳೆ ಸುದ್ದಿಯೊಂದನ್ನು ನೀಡಿವೆ.
2019-20 ನೇ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಥೆ ವಿತರಣೆ ಮಾಡಿರುವ ಪಾಸ್ಗಳನ್ನು ಬಳಕೆ ಮಾಡಿಕೊಂಡು ಮುಂದಿನ ತಿಂಗಳ ವರೆಗೆ ಸರ್ಕಾರಿ ಸಾರಿಗೆಯಲ್ಲಿ ಪ್ರಯಾಣ ನಡೆಸಲು ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಡಿ. 10 ರ ವರೆಗೆ ಈ ಪಾಸ್ಗಳನ್ನು ಬಳಕೆ ಮಾಡಬಹುದಾಗಿದೆ ಎಂದು ಸಂಸ್ಥೆ ಸೂಚಿಸಿದೆ.
ರಾಜ್ಯದಲ್ಲಿ ಪದವಿ, ಪಿಜಿ, ಡಿಪ್ಲೊಮಾ, ವೈದ್ಯಕೀಯ, ತಾಂತ್ರಿಕ ವಿದ್ಯಾಭ್ಯಾಸ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಈ ಆದೇಶವನ್ನು ಹೊರಡಿಸಲಾಗಿದ್ದು, ಇದರ ಅನುಕೂಲವನ್ನು ಪಡೆದುಕೊಳ್ಳುವಂತೆಯೂ ಸಂಸ್ಥೆ ತಿಳಿಸಿದೆ. ಪಾಸ್ ಜೊತೆಗೆ ಈ ಬಾರಿ ಕಾಲೇಜಿಗೆ ದಾಖಲಾಗಿರುವುದಕ್ಕೆ ಸಾಕ್ಷಿಯಾಗಿ ಶುಲ್ಕ ಪಾವತಿ ಮಾಡಿರುವ ರಸೀತಿಯನ್ನು ಸಹ ಹೊಂದಿರುವಂತೆ ಸಾರಿಗೆ ಸಂಸ್ಥೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.