ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ನಾಗ್ರೋಟಾ ಸಮೀಪದ ಬಾನ್ ಟೋಲ್ ಪ್ಲಾಜಾ ಸಮೀಪದಲ್ಲಿ ಇಂದು ಮುಂಜಾನೆ ನಾಲ್ವರು ಉಗ್ರರನ್ನು ಭಾರತೀಯ ಭದ್ರತಾ ಪಡೆಯ ಯೋಧರು ಎನ್ಕೌಂಟರ್ ನಡೆಸಿ ಸಂಹರಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರಗಾಮಿಗಳು ಅವಿತುಕೊಂಡಿದ್ದ ಖಚಿತ ಮಾಹಿತಿಯನ್ನಾಧರಿಸಿ ಶ್ರೀನಗರ ಹೆದ್ದಾರಿಯಲ್ಲಿ ಕೆಲ ಗಂಟೆಗಳ ಕಾಲ ಸಂಚಾರಕ್ಕೆ ನಿಷೇಧ ಹೇರಿ ಭದ್ರತಾ ಪಡೆಗಳು ಈ ಕಾರ್ಯಾಚರಣೆಯನ್ನು ಯಶಸ್ವಿಗೊಳಿಸಿವೆ. ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಉಗ್ರಗಾಮಿಗಳ ತಂಡ ಸೇನೆಯ ಮೇಲೆ ಫೈರಿಂಗ್ ನಡೆಸಿ, ಅರಣ್ಯ ಪ್ರದೇಶದತ್ತ ಓಡುವ ಮೂಲಕ ತಪ್ಪಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ. ಅದೇ ವೇಳೆಗೆ ಭದ್ರತಾ ಸಿಬ್ಬಂದಿಗಳು ಸಹ ಗುಂಡಿನ ದಾಳಿ ನಡೆಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಸಂಹಾರವಾಗಿದೆ. ಜೊತೆಗೆ ಓರ್ವ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ನಂತರವೂ ಸ್ಥಳದಲ್ಲಿ ಬಿಗಿ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.