ಬೆಂಗಳೂರು: ರಾಜ್ಯದೆಲ್ಲೆಡೆ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಕೂಗು ಕೇಳಿ ಬರುತ್ತಿದ್ದು, ಗೋ ಹತ್ಯೆ ನಿಷೇಧ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸದಾ ಬದ್ಧವಾಗಿದೆ ಎಂದು ರಾಜ್ಯ ಬಿಜೆಪಿ ಸರ್ಕಾರ ಮಾಹಿತಿ ನೀಡಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದ್ದು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸಲಹೆ, ಸೂಚನೆಗಳನ್ನು ಸಹ ನೀಡಿರುವುದಾಗಿ ತಿಳಿಸಿದೆ. ಅದರಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರು ಪಶುಸಂಗೋಪನೆ, ಹಜ್-ವಕ್ಫ್ ಸಚಿವ ಪ್ರಭು ಚೌಹಾಣ್ ಜೊತೆಗೂ ಚರ್ಚೆ ನಡೆಸಿರುವುದಾಗಿಯೂ ತಿಳಿಸಿದೆ.
ಗೋ ಹತ್ಯೆ ನಿಷೇಧಿಸಲು ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ಅವರ ನೇತೃತ್ವದ ಬಿಜೆಪಿ ಸರ್ಕಾರ ಬದ್ಧವಾಗಿದೆ. ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಈಗಾಗಲೇ ಸರ್ಕಾರಕ್ಕೆ ಈ ಕುರಿತು ಸಲಹೆ ನೀಡಿದ್ದಾರೆ.
ಇದರ ಬಗ್ಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ @CTRavi_BJP ಅವರು ಸಚಿವ @PrabhuChavanBJP ಅವರೊಂದಿಗೆ ಚರ್ಚಿಸಿದ್ದಾರೆ.
— BJP Karnataka (@BJP4Karnataka) November 20, 2020
ಜೊತೆಗೆ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೊಳಿಸಲು ರಾಜ್ಯ ಸರ್ಕಾರ ಈಗಾಗಲೇ ಸಮಿತಿ ರಚಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತವಾಗಿದೆ. ಮುಂದಿನ ಅಧಿವೇಶನದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಮಸೂದೆ ಮಂಡನೆ ಮಾಡಲಿದೆ. ರಾಜ್ಯದ ಜನರ ಅಪೇಕ್ಷೆ ಶೀಘ್ರದಲ್ಲೇ ನೆರವೇರಲಿದೆ ಎಂದೂ ಸರ್ಕಾರದ ಪರ ಬಿಜೆಪಿ ಕರ್ನಾಟಕ ಟ್ವೀಟ್ ಮಾಡಿದೆ.
ಗೋ ಹತ್ಯೆ ನಿಷೇಧ ಜಾರಿಗೊಳಿಸಲು ಬಿಜೆಪಿ ಸರ್ಕಾರ ಈಗಾಗಲೇ ಸಮಿತಿ ರಚಿಸಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಮುಂದಿನ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರ ಮಸೂದೆ ಮಂಡಿಸಲಿದೆ.
ರಾಜ್ಯದ ಜನತೆಯ ಅಪೇಕ್ಷೆ ಶೀಘ್ರವಾಗಿ ನೆರವೇರಲಿದೆ. https://t.co/62tuDUpj3e
— BJP Karnataka (@BJP4Karnataka) November 20, 2020
ಇನ್ನು ಇದಕ್ಕೆ ಪೂರಕ ಎಂಬಂತೆ ಸಿ ಟಿ ರವಿ ಅವರೂ ಟ್ವೀಟ್ ಮಾಡಿದ್ದು, ಶೀಘ್ರದಲ್ಲೇ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಯಾಗಲಿದೆ. ಮುಂದಿನ ಅಧಿವೇಶನದಲ್ಲಿ ಗೋವುಗಳ ಕಳ್ಳತನ, ಹತ್ಯೆ ನಿಷೇಧ ಕಾಯ್ದೆಗಳು ಜಾರಿಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಸಂಬಂಧ ಸಚಿವ ಪ್ರಭು ಚೌಹಾಣ್ ಜೊತೆಗೂ ಮಾತುಕತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
Cow Slaughter Ban will be a reality in Karnataka in the near future.
In have asked Animal Husbandry Minister Sri @PrabhuChavanBJP to get “The Karnataka Prevention of Slaughter & Preservation of Cattle Bill” passed in the Cabinet and present the same in upcoming Assembly Session.
— C T Ravi 🇮🇳 ಸಿ ಟಿ ರವಿ (@CTRavi_BJP) November 20, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.