ಬೆಂಗಳೂರು: ಕೊರೋನಾ ಲಾಕ್ಡೌನ್ ಬಳಿಕ, ಸಾಲು ಸಾಲು ಹಬ್ಬಗಳ ಕಾರಣದಿಂದಾಗಿ ದೇಶೀಯ ವಿಮಾನಯಾನ ಮಾಡುವ ಪ್ರಯಾಣಿಕರ ಸಂಖ್ಯೆಯಲ್ಲಿ ಅಕ್ಟೋಬರ್ ತಿಂಗಳಿಗೆ ಸಂಬಂಧಿಸಿದಂತೆ ಪ್ರಮಾಣ ಹೆಚ್ಚಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮಾಹಿತಿ ನೀಡಿದೆ.
ಸೆಪ್ಟೆಂಬರ್ ತಿಂಗಳಿನಲ್ಲಿ 39.43 ಲಕ್ಷ ಪ್ರಯಾಣಿಕರು ವಿಮಾನಯಾನ ಮಾಡಿದ್ದಾರೆ. ಅಕ್ಟೋಬರ್ ತಿಂಗಳಿನಲ್ಲಿ ಈ ಸಂಖ್ಯೆ 52.71 ಲಕ್ಷಗಳಿಗೆ ಏರಿಕೆಯಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ 57.2% ಪ್ರಯಾಣಿಕರ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಡಿಜಿಸಿಎ ಮುಖ್ಯಸ್ಥ ಅರುಣ್ ಕುಮಾರ್, ಕೊರೋನಾ ಬಳಿಕ ಇದೀಗ ತಮ್ಮ ಪ್ರಯಾಣಕ್ಕೆ ವಿಮಾನವನ್ನು ಆಯ್ಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿದೆ. ಕೊರೋನಾ ಸೋಂಕಿಗೆ ಲಸಿಕೆ ದೊರೆತ ಬಳಿಕ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಬಹುದು. ಮೊದಲಿನಂತೆ ಜನಜೀವನವೂ ಆರಂಭವಾಗಲು ಸಾಧ್ಯವಿದೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.