ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನಗ್ರೋಟದಲ್ಲಿ ನಡೆದ ನಾಲ್ಕು ಜೈಶೇ ಮೊಹಮ್ಮದ್ ಉಗ್ರರ ಎನ್ಕೌಂಟರ್ಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಮತ್ತು ಗುಪ್ತಚರ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಭದ್ರತಾ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದರು ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.
26/11 ಮುಂಬೈ ಭಯೋತ್ಪಾದನಾ ದಾಳಿಯ ವರ್ಷಾಚರಣೆಯ ಸಂದರ್ಭದಲ್ಲಿ ಈ ಉಗ್ರರು ಭಾರತಲ್ಲಿ ಅತಿ ದೊಡ್ಡ ಸ್ಪೋಟ ನಡೆಸಲು ಹೊಂಚು ಹಾಕಿದ್ದರು ಎಂದು ತಿಳಿದು ಬಂದಿದೆ.
2008ರ ನವೆಂಬರ್ 26ರಂದು ಮುಂಬಯಿ ಮೇಲೆ ಬೃಹತ್ ಭಯೋತ್ಪಾದನಾ ದಾಳಿ ನಡೆದಿತ್ತು. 10 ಮಂದಿ ಲಷ್ಕರ್-ಇ-ತೋಯ್ಬಾದ ಉಗ್ರರು ಸರಣಿ ಗುಂಡಿನ ದಾಳಿಯನ್ನು ನಡೆಸಿದ್ದರು. ಇದರಲ್ಲಿ 166 ಮಂದಿ ಪ್ರಾಣ ಕಳೆದುಕೊಂಡರು ಮತ್ತು ಸುಮಾರು 300 ಮಂದಿ ಗಾಯಗೊಂಡಿದ್ದರು.
ನಿನ್ನೆ ನಗ್ರೋಟದಲ್ಲಿ ಭದ್ರತಾ ಪಡೆಗಳ ಗುಂಡೇಟಿಗೆ ಸಂಹರಿಸಲ್ಪಟ್ಟ ಉಗ್ರರು ನವೆಂಬರ್ 26ರಂದು ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ದಾಳಿಯನ್ನು ನಡೆಸುವ ಹೊಂಚು ಹಾಕಿದ್ದರು ಎಂಬುದು ತಿಳಿದು ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.