ನವದೆಹಲಿ: ಮೂರನೇಯ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆಯನ್ನು ಮಂಗಳವಾರ ಪ್ರಕಟಿಸಿರುವ ಆರ್ಬಿಐ, ಬಡ್ಡಿದರದಲ್ಲಿ ಯಥಾಸ್ಥಿತಿಯನ್ನು ಕಾಪಾಡಿಕೊಂಡಿದೆ.
ರೆಪೋ ದರ ಪ್ರಸ್ತುತ ಶೇ.7.25ರಷ್ಟಿದೆ, ನಗದು ಮೀಸಲು ಅನುಪಾತ ಶೇ.4ರಷ್ಟಿದೆ. ಇದರಲ್ಲಿ ಯಾವುದೇ ಬದಲಾವಣೆಯನ್ನೂ ಮಾಡಲಾಗಿಲ್ಲ. ಆರ್ಬಿಐನ ಈ ಕ್ರಮಕ್ಕೆ ಉದ್ಯಮ ವಲಯ ಅಸಮಾಧಾನ ವ್ಯಕ್ತಪಡಿಸಿದೆ.
ಮುಂಬರುವ ಹಣಕಾಸು ನೀತಿ ಪರಾಮರ್ಶೆ ಸೆಪ್ಟಂಬರ್ 29ರಂದು ಪ್ರಕಟಗೊಳ್ಳಲಿದೆ. ಆರ್ಥಿಕ ಚೇತರಿಕೆ, ಹಣದುಬ್ಬರ, ಮುಂಗಾರನ್ನು ನೋಡಿಕೊಂಡು ಇಲ್ಲಿ ಬಡ್ಡಿದರ ಕಡಿತ ಮಾಡುವ ಭರವಸೆಯನ್ನು ಆರ್ಬಿಐ ಗವರ್ನರ್ ರಘುರಾಮ್ ರಾಜನ್ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.