ನವದೆಹಲಿ: ಸಾರ್ವತ್ರಿಕ ಆರೋಗ್ಯ ರಕ್ಷಣೆಯಲ್ಲಿ ಭಾರತವು ಮಹತ್ವದ ಹೆಗ್ಗುರುತನ್ನು ದಾಟಿದೆ. ಪ್ರಸ್ತುತ ದೇಶದಲ್ಲಿ 50,025 ಆಯುಷ್ಮಾನ್ ಭಾರತ್ – ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳು (ಎಬಿ-ಎಚ್ಡಬ್ಲ್ಯೂಸಿ) ಕಾರ್ಯನಿರ್ವಹಿಸುತ್ತಿವೆ.
ಮನೆಗಳಿಗೆ ಹತ್ತಿರವಿರುವಂತೆ ಸಮುದಾಯಗಳಿಗೆ ಸಮಗ್ರ ಪ್ರಾಥಮಿಕ ಆರೋಗ್ಯ (ಸಿಪಿಎಚ್ಸಿ) ಸೇವೆಗಳನ್ನು ಒದಗಿಸುವ ಉದ್ದೇಶದಿಂದ, ಡಿಸೆಂಬರ್ 2022 ರ ವೇಳೆಗೆ 1.5 ಲಕ್ಷ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ 50,000 ಕ್ಕಿಂತ ಹೆಚ್ಚು ಕೇಂದ್ರಗಳು ಸ್ಥಾಪನೆಯಾಗಿದ್ದು, 1/3 ಗುರಿಯನ್ನು ಪೂರೈಸಲಾಗಿದೆ. ಇದು 25 ಕೋಟಿಗೂ ಹೆಚ್ಚು ಜನರಿಗೆ ಕೈಗೆಟುಕುವ ಪ್ರಾಥಮಿಕ ಆರೋಗ್ಯ ಸೇವೆಗಳಿಗೆ ಸುಧಾರಿತ ಪ್ರವೇಶವನ್ನು ನೀಡಲಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಎದುರಾದ ಸವಾಲುಗಳ ನಡುವೆಯೂ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರಗಳನ್ನು ಕಾರ್ಯಗತಗೊಳಿಸಲು ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳು ಮಾಡಿದ ಪ್ರಯತ್ನಗಳನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅಭಿನಂದಿಸಿದ್ದಾರೆ.
ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿನ ಸಮರ್ಪಣೆ ಮತ್ತು ಈ ಕಷ್ಟದ ಸಮಯದಲ್ಲಿ ಲಕ್ಷಾಂತರ ಜನರಿಗೆ ಅಗತ್ಯ ಸೇವೆಗಳನ್ನು ಒದಗಿಸಿದ್ದಕ್ಕಾಗಿ ಮುಂಚೂಣಿಯ ಆರೋಗ್ಯ ಕಾರ್ಯಕರ್ತರು, ವೈದ್ಯಕೀಯ ಅಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತರಿಗೆ ಅವರು ವಿಶೇಷವಾಗಿ ಧನ್ಯವಾದ ಅರ್ಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.