ಗಂಗಾವತಿ: ರಾಮಾಯಣದಲ್ಲಿ ಪ್ರಮುಖ ಸ್ಥಳ ಎಂಬ ಹಿನ್ನೆಲೆಯುಳ್ಳ ಇತಿಹಾಸ ಪ್ರಸಿದ್ಧ ಕಿಷ್ಕಿಂದೆಯ ಅಂಜನಾದ್ರಿ ಬೆಟ್ಟದಲ್ಲಿ ನಿರ್ಮಾಣವಾಗಲಿರುವ 215 ಅಡಿ ಎತ್ತರದ ಹನುಮಂತನ ಮೂರ್ತಿಯ ಶಿಲೆಗಳಿಗೆ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು, ರಾಮಾಯಣದಲ್ಲಿ ಹನುಮನ ಭೂಮಿ ಕಿಷ್ಕಿಂದೆಗೆ ವಿಶೇಷ ಮಹತ್ವವಿದೆ. ಈ ಪ್ರದೇಶ ಪವಿತ್ರ ಭೂಮಿಯಾಗಿದ್ದು ಪ್ರಭು ಶ್ರೀ ರಾಮ, ಲಕ್ಷ್ಮಣ, ಹನುಮಂತನ ಪಾದಸ್ಪರ್ಶವಾದ ಸ್ಥಳವಾಗಿದೆ ಎಂದು ತಿಳಿಸಿದ್ದಾರೆ.
ಚಿಕ್ಕರಾಂಪುರದ ನೂತನ ಹನುಮನ ಜನ್ಮಭೂಮಿ ಟ್ರಸ್ಟ್ ಈ ವಿಗ್ರಹವನ್ನು ಸ್ಥಾಪಿಸುತ್ತಿದೆ. 215 ಅಡಿ ಎತ್ತರದ ಈ ವಿಗ್ರಹ ನಿರ್ಮಾಣ ಕಾರ್ಯಕ್ಕೆ ರಾಜ್ಯ, ಕೇಂದ್ರ ಸರ್ಕಾರಗಳು ಕಾನೂನು ರೀತಿಯ ಅವಕಾಶ ಮಾಡಿಕೊಡುವಂತೆಯೂ ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.