ಬೆಂಗಳೂರು: ಇದೇ ಮೊದಲ ಬಾರಿಗೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ವಾಯುವಜ್ರ ಬಸ್ಸುಗಳಿಗೆ ಆನ್ಲೈನ್ ಬುಕ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. 2008 ರ ಮೇ ತಿಂಗಳಲ್ಲಿ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಆನ್ಲೈನ್ ಬುಕ್ಕಿಂಗ್ಗೆ ಅವಕಾಶ ನೀಡಲಾಗಿದೆ.
ಪ್ರಯಾಣದ ದಿನದ ಒಂದು ತಿಂಗಳ ಮೊದಲೇ ಬುಕ್ಕಿಂಗ್ ಮಾಡಬಹುದಾಗಿದೆ. ನಿರ್ಗಮನದ 30 ನಿಮಿಷಕ್ಕೆ ಮೊದಲು ಬುಕ್ಕಿಂಗ್ ಕ್ಲೋಸ್ ಮಾಡಲಾಗುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮುಂದಿನ ವಾರ ಈ ಸೇವೆ ಆರಂಭವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಕೆಎಸ್ಆರ್ಟಿಸಿ ಅವತಾರ್ ಫ್ಲ್ಯಾಟ್ಫಾರ್ಮ್ನಲ್ಲಿ ಬುಕ್ಕಿಂಗ್ ಆರಂಭ ಮಾಡಲಾಗುತ್ತದೆ. ಮುಂಗಡ ಟಿಕೆಟ್ ಖರೀದಿಸಿದರೆ ಪ್ರಯಾಣಿಕರು ಬಸ್ಗಾಗಿ ಕಾಯುವ ಅವಕಾಶ ತಪ್ಪಲಿದೆ. ಇದು ಸೂಕ್ತ ಸಮಯಕ್ಕೆ ತಲುಪುವುದಕ್ಕೂ ಸಹಾಯವಾಗಲಿದೆ. ಕ್ಯಾಬ್ಗಳಿಂದ ಕಡಿಮೆ ವೆಚ್ಚದಲ್ಲಿ ಈ ಸೇವೆ ಸಾಧ್ಯವಾಗಲಿದೆ. 100-320 ರೂ. ಗಳಲ್ಲಿ ವಾಯುವಜ್ರದ ಮೂಲಕ ವಿಮಾನ ನಿಲ್ದಾಣ ತಲುಪಲು ಸಹಾಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.