ನವದೆಹಲಿ: ಬಿಹಾರದ ಗಯಾ ಜಿಲ್ಲೆಯಲ್ಲಿ ಶನಿವಾರ ಮಧ್ಯರಾತ್ರಿ ಭದ್ರತಾ ಪಡೆಗಳು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ ಗುಂಡಿನ ಚಕಮಕಿ ಆರಂಭಗೊಂಡು ಮೂವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಂಡಿನ ಚಕಮಕಿಯಲ್ಲಿ ಕೊಲ್ಲಲ್ಪಟ್ಟವರಲ್ಲಿ ಮಾವೋವಾದಿ ವಲಯ ಕಮಾಂಡರ್ ಅಲೋಕ್ ಯಾದವ್ ಕೂಡ ಸೇರಿದ್ದಾನೆ ಎಂದು ಹೇಳಲಾಗಿದೆ.
205 ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್) ಮತ್ತು ಬಿಹಾರ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಎನ್ಕೌಂಟರ್ ಸೈಟ್ನಿಂದ ಒಂದು ಎಕೆ -47 ರೈಫಲ್ ಮತ್ತು ಒಂದು ಐಎನ್ಎಸ್ಎಎಸ್ ರೈಫಲ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.
ಎನ್ಕೌಂಟರ್ ಬಿಹಾರದ ಗಯಾ ಜಿಲ್ಲೆಯ ಬರಾಚಟ್ಟಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ರಾಜ್ಯ ರಾಜಧಾನಿ ಪಾಟ್ನಾದಿಂದ ಸುಮಾರು 100 ಕಿ.ಮೀ.ದೂರದಲ್ಲಿದೆ ಈ ಪ್ರದೇಶ.
ಅಧಿಕೃತ ಹೇಳಿಕೆಯ ಪ್ರಕಾರ, ಮೃತ ಅಲೋಕ್ ಯಾದವ್ ಈ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಕೊಂದಿದ್ದಾನೆ ಎಂಬ ವರದಿಗಳ ನಂತರ ಭದ್ರತಾ ಪಡೆಗಳು ರಾತ್ರಿ 12.20 ರ ಸುಮಾರಿಗೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.