ನವದೆಹಲಿ: ರಾಜ್ಯದ ಪ್ರತಿಷ್ಠಿತ ಸಂಸ್ಥೆ ಇನ್ಫೋಸಿಸ್ ಫೌಂಡೇಶನ್ನ ಮುಖ್ಯಸ್ಥೆ ಡಾ. ಸುಧಾಮೂರ್ತಿ ಅವರಿಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು 21 ನೇ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನಿಸಿ ಗೌರವಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಸುಧಾಮೂರ್ತಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಧಾ ಮೂರ್ತಿ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ. ಅವರು ಈ ಪ್ರಶಸ್ತಿಯನ್ನು ಸ್ವೀಕರಿಸುವುದಕ್ಕೆ ಸಂಪೂರ್ಣ ಅರ್ಹರು ಎಂದು ಪ್ರಶಸ್ತಿ ಪ್ರದಾನಿಸಿದ ಬಳಿಕ ಉಪರಾಷ್ಟ್ರಪತಿಗಳು ತಿಳಿಸಿದ್ದಾರೆ.
ಸುಧಾಮೂರ್ತಿ ಅವರು ತಮ್ಮ ಇನ್ಫೋಸಿಸ್ ಫೌಂಡೇಶನ್ ಮೂಲಕ ನೆರೆ, ಬರ ಪರಿಹಾರಕ್ಕೆ ದೇಣಿಗೆ, ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಗೆ ನೆರವು, ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿ, ಬಡ ರೋಗಿಗಳ ಚಿಕಿತ್ಸೆಗೆ ನೆರವು ಮೊದಲಾದ ಕೆಲಸಗಳು ಮತ್ತು ಅನೇಕ ರೀತಿಯ ಜನಾನುರಾಗಿ, ಸಮಾಜ ಮುಖಿ ಕಾರ್ಯಗಳ ಮೂಲಕವೇ ಮನೆಮಾತಾಗಿದ್ದಾರೆ. ಅವರ ಸಮಾಜ ಸೇವೆಯನ್ನು ಪರಿಗಣಿಸಿ ಮೈಸೂರು ವಿವಿ ಅವರಿಗೆ ಕಳೆದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.