ಹುಬ್ಬಳ್ಳಿ: ನಗರದಲ್ಲಿ ಜಯದೇವ ಹೃದ್ರೋಗ ಸಂಸ್ಥೆ, ಕಿದ್ವಾಯಿ ಸಹಯೋಗದಲ್ಲಿ ಮೂತ್ರಪಿಂಡ ಖಾಯಿಲೆ ಆಸ್ಪತ್ರೆ ಮತ್ತು ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುವುದಾಗಿ ಸಚಿವ ಡಾ. ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
ಅವರು ನಗರದಲ್ಲಿ ಕಿಮ್ಸ್ನ ನೂತನ ಆಡಳಿತ ಭವನ, ಹೃದ್ರೋಗ ಆಸ್ಪತ್ರೆ, ಶವಾಗಾರ, ಸ್ಕಿಲ್ ಲ್ಯಾಬ್, ರೆಟಿನಾ ಕ್ಲಿನಿಕ್ಗಳ ಹೊಸ ಕಟ್ಟಡಗಳನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕೊರೋನಾ ಬಗ್ಗೆಯೂ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ ಸುಮಾರು 1 ಕೋಟಿ ಕೊರೋನಾ ಟೆಸ್ಟ್ಗಳನ್ನು ನಡೆಸಲಾಗಿದೆ. ಅಲ್ಲದೆ ರಾಜ್ಯದಲ್ಲಿ ಕೊರೋನಾ ಸಂಕಷ್ಟಕ್ಕೆ ತುತ್ತಾದ ರೋಗಿಗಳ ಚಿಕಿತ್ಸೆಗಾಗಿ ರಾಜ್ಯ ಸರ್ಕಾರ 300 ಕೋಟಿಗೂ ಅಧಿಕ ಹಣವನ್ನು ಬಳಕೆ ಮಾಡಿದೆ. ದೇಶದ ಹಲವು ನಗರಗಳಲ್ಲಿ ಕೊರೋನಾ ಎರಡನೇ ಹಂತದ ಅಲೆ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೋಂಕು ತಡೆಗೆ ಪೂರಕ ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಮತ್ತು ಸಾವಿನ ಪ್ರಮಾಣ ಸಹ ನಿಯಂತ್ರಣದಲ್ಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹುಬ್ಬಳ್ಳಿಯನ್ನು ಆರೋಗ್ಯ ನಗರವಾಗಿಯೂ ಪರಿವರ್ತನೆ ಮಾಡುವುದಾಗಿ ಸಚಿವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.