ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಶಿರಾ, ಆರ್ಆರ್ ನಗರ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ರಾಜೇಶ್ ಗೌಡ ಮತ್ತು ಮುನಿರತ್ನ ಅವರು ಇಂದು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಇವರಿಬ್ಬರೂ ವಿಧಾನ ಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸಮ್ಮುಖದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು.
ಮುನಿರತ್ನ ಅವರು ಆರ್ ಆರ್ ನಗರ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಯಾಗಿ ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರು ಗೆಲುವು ಸಾಧಿಸಿ, ಶಿರಾದಲ್ಲಿ ಕೇಸರಿ ಕಮಲವನ್ನು ಮೊದಲನೇ ಬಾರಿಗೆ ಅರಳಿಸುವ ಮೂಲಕ ಮನೆಮಾತಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.