ಬೆಂಗಳೂರು: ವನ್ಯಜೀವಿ ಸಂಪತ್ತಿನ ವಿಚಾರದಲ್ಲಿ ರಾಜ್ಯ ಅಗ್ರಸ್ಥಾನಿಯಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅರಣ್ಯ ಸಂಪತ್ತು, ಜೀವ ವೈವಿಧ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೋರ್ವರೂ ಪ್ರಯತ್ನ ಪಡಬೇಕಾಗಿದೆ. ಎಲ್ಲಾ ರೀತಿಯ ಒತ್ತಡಗಳನ್ನು ಮೀರಿ ಅರಣ್ಯ, ವನ್ಯಜೀವಿಗಳನ್ನು ಸಂರಕ್ಷಣೆ ಮಾಡಿಕೊಂಡು ಬರುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳ ಕಾರ್ಯ ಶ್ಲಾಘನೀಯ. ಇದರಿಂದಾಗಿ ರಾಜ್ಯ ಸರ್ಕಾರ ಅರಣ್ಯ ಮತ್ತು ಜೀವ ಸಂಕುಲಗಳನ್ನು ಉಳಿಸುವ ಪಟ್ಟಿಯಲ್ಲಿ ಅಗ್ರಗಣ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಆನೆ ಮತ್ತು ಹುಲಿಗಳ ಪ್ರಮಾಣದಲ್ಲಿ ರಾಜ್ಯ 8 ನೇ ಸ್ಥಾನದಲ್ಲಿದೆ. ಅರಣ್ಯ ಸಿಬ್ಬಂದಿಗಳ ಕರ್ತವ್ಯ ಪ್ರಜ್ಞೆಯಿಂದಾಗಿ ರಾಜ್ಯ ಈ ಸಾಧನೆ ಮಾಡುವಂತಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಎಲ್ಲರೂ ಸಹಕಾರ ನೀಡುವ ಮೂಲಕ ವನ ಮತ್ತು ವನ್ಯಜೀವಿಗಳನ್ನು ರಕ್ಷಣೆ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಸಚಿವ ಆನಂದ್ ಸಿಂಗ್, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.
ಕರ್ನಾಟಕ ಸಮೃದ್ಧ ಅರಣ್ಯ ಸಂಪತ್ತು, ವೈವಿಧ್ಯಮಯ ವನ್ಯಜೀವಿಗಳಿಗೆ ಖ್ಯಾತವಾಗಿದೆ. ಅರಣ್ಯ, ವನ್ಯಜೀವಿ ಸಂರಕ್ಷಣೆಯಲ್ಲಿ ಗಣನೀಯ ಸಾಧನೆ ಮಾಡಿದ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಇಂದು ‘ಮುಖ್ಯಮಂತ್ರಿಗಳ ಪದಕ ಪ್ರದಾನ’ ಮಾಡಲಾಯಿತು. ಅರಣ್ಯ ಸಚಿವರು, ಅರಣ್ಯ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. pic.twitter.com/VemqdtTrm3
— B.S. Yediyurappa (@BSYBJP) November 23, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.