ಗುವಾಹಟಿ: ಕೋವಿಡ್ -19 ನಂತರ ಉಂಟಾದ ಆರೋಗ್ಯ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಸೋಮವಾರ ಗುವಾಹಟಿಯಲ್ಲಿ ನಿಧನರಾದರು ಎಂದು ಅಸ್ಸಾಂ ರಾಜ್ಯ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು. ಪತ್ನಿ ಡಾಲಿ, ಮಗಳು ಚಂದ್ರಮಾ ಮತ್ತು ಮಗ ಗೌರವ್ ಅವರನ್ನು ಅಗಲಿದ್ದಾರೆ.
ಮೂರು ಬಾರಿ ಅಸ್ಸಾಂ ಮುಖ್ಯಮಂತ್ರಿಯಾಗಿದ್ದ ಗೊಗೊಯ್ ಅವರು ಸಂಜೆ 5.34ಕ್ಕೆ ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಶರ್ಮಾ ಹೇಳಿದ್ದಾರೆ.
ಕೋವಿಡ್-19 ಹಿನ್ನೆಲೆ ಆಗಸ್ಟ್ 26 ರಂದು ಅವರನ್ನು ಮೊದಲು ಆಸ್ಪತ್ರೆಗೆ ದಾಖಲಿಸಲಾಯಿತು ನಂತರ ಬಿಡುಗಡೆಯಾಗಿದ್ದರು ಮತ್ತು ನವೆಂಬರ್ 2 ರಂದು ಮತ್ತೆ ದಾಖಲಾದರು..
ಬಹು ಅಂಗಾಂಗ ವೈಫಲ್ಯದ ನಂತರ ಅವರ ಸ್ಥಿತಿ ನವೆಂಬರ್ 21 ರಂದು ಹದಗೆಟ್ಟಿತು ಎನ್ನಲಾಗಿದೆ.
ಗೊಗೊಯ್ 2001 ರಿಂದ ಟೈಟಾಬೋರ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಅವರು ಆರು ಬಾರಿ ಸಂಸದರಾಗಿದ್ದರು ಮತ್ತು ಎರಡು ಬಾರಿ ಕೇಂದ್ರ ಸಚಿವರಾಗಿದ್ದರು.
Shri Tarun Gogoi Ji was a popular leader and a veteran administrator, who had years of political experience in Assam as well as the Centre. Anguished by his passing away. My thoughts are with his family and supporters in this hour of sadness. Om Shanti. pic.twitter.com/H6F6RGYyT4
— Narendra Modi (@narendramodi) November 23, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.