ನವದೆಹಲಿ: ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯುವುದಕ್ಕೆ ನಡೆಸುವ ಜೆಇಇ-ಮೇನ್ ಅನ್ನು ಮುಂದೂಡಲಾಗಿದೆ.
2021 ರ ಜನವರಿ ತಿಂಗಳಿನಲ್ಲಿ ನಡೆಯಬೇಕಿದ್ದ ಪರೀಕ್ಷೆಯನ್ನು ಫೆಬ್ರವರಿ ತಿಂಗಳಲ್ಲಿ ನಡೆಸಲಾಗುವುದು ಎಂದು ಅಧಿಕಾರಿಗಳು ಈ ಸಂಬಂಧ ಮಾಹಿತಿ ನೀಡಿದ್ದಾರೆ. ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
ಎಂಜಿನಿಯರಿಂಗ್ ಪ್ರವೇಶ ಇನ್ನೂ ಚಾಲ್ತಿಯಲ್ಲಿದೆ. 2021 ರ ಫೆಬ್ರವರಿಯಲ್ಲಿ ಜೆಇಇ-ಮೇನ್ ನಡೆಯಲಿದೆ. ತಮ್ಮ ವಿಭಾಗಗಳ ಬಗ್ಗೆ, ಪಡೆದ ಅಂಕಗಳ ಮೇಲೆ ತೃಪ್ತಿ ಇಲ್ಲದ ವಿದ್ಯಾರ್ಥಿಗಳಿಗೆ ಇದು ಇನ್ನೊಂದು ಅವಕಾಶವಾಗಿರಲಿದೆ. ಪರೀಕ್ಷೆಯ ದಿನಾಂಕದ ಬಗ್ಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. ಅರ್ಜಿಯ ಪ್ರಕ್ರಿಯೆ ಮುಂದಿನ ತಿಂಗಳು ಆರಂಭವಾಗಲಿದೆ ಎಂದು ಅಧಿಕಾರಿಗಳು ಈ ಸಂಬಂಧ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.