ಚೆನ್ನೈ: ತಮಿಳುನಾಡು ಮತ್ತು ಪುದುಚೇರಿಯ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾತನಾಡಿದ್ದು, ಬುಧವಾರದೊಳಗೆ ರಾಜ್ಯ ಮತ್ತು ಕೇಂದ್ರಾಡಳಿತವನ್ನು ದಾಟಲಿರುವ ಚಂಡಮಾರುತದ ಬಗ್ಗೆ ಚರ್ಚೆ ನಡೆಸಿದ್ದಾರೆ.
“ನಿವಾರ್ ಚಂಡಮಾರುತದ ಹಿನ್ನೆಲೆಯಲ್ಲಿ ಪರಿಸ್ಥಿತಿ ಬಗ್ಗೆ ತಮಿಳುನಾಡು ಸಿಎಂ ಶ್ರೀ ಇ ಪನ್ನೀರಸೆಲ್ವಂ ಮತ್ತು ಪುದುಚೇರಿ ಸಿಎಂ ಶ್ರೀ ವಿ ನಾರಾಯಣಸಾಮಿ ಅವರೊಂದಿಗೆ ಮಾತನಾಡಿದೆ. ಕೇಂದ್ರದಿಂದ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವ ಭರವಸೆ ನೀಡಿದ್ದೇನೆ. ಪೀಡಿತ ಪ್ರದೇಶಗಳಲ್ಲಿ ವಾಸಿಸುವವರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ, “ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಸೋಮವಾರ ಕೇಂದ್ರ ಸಚಿವ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿಯ (ಎನ್ಸಿಎಂಸಿ) ಸಭೆಯ ಅಧ್ಯಕ್ಷತೆ ವಹಿಸಿ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಪುದುಚೇರಿಯ ಮುಖ್ಯ ಕಾರ್ಯದರ್ಶಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಬರಲಿರುವ ಚಂಡಮಾರುತದ ಸ್ಥಿತಿಯನ್ನು ಪರಿಶೀಲಿಸಿದರು.
ಬಿಕ್ಕಟ್ಟು ನಿರ್ವಹಣಾ ಸಮಿತಿಯು “ಶೂನ್ಯ ಪ್ರಾಣಹಾನಿ” ಮತ್ತು ಪೀಡಿತ ಪ್ರದೇಶಗಳಲ್ಲಿ ಸಾಮಾನ್ಯ ಸ್ಥಿತಿಯನ್ನು ಪುನಃಸ್ಥಾಪಿಸುವ ಗುರಿಯನ್ನು ಹೊಂದಿದೆ ಎಂದು ಗೌಬಾ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಲಹೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅವರು ಆದೇಶಿಸಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದ್ದಾರೆ.
Spoke to Tamil Nadu CM Shri @EPSTamilNadu and Puducherry CM Shri @VNarayanasami regarding the situation in the wake of Cyclone Nivar. Assured all possible support from the Centre. I pray for the safety and well-being of those living in the affected areas.
— Narendra Modi (@narendramodi) November 24, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.