ಉಡುಪಿ: ಕರಾವಳಿ ಭಾಗದ ಪಶ್ಚಿಮ ಘಟ್ಟದ ನದಿಗಳಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡುವ ಬಗ್ಗೆ ಯೋಜನೆ ಸಿದ್ಧಪಡಿಸಲಾಗಿದೆ. 1348 ಹೊಸ ಕಿಂಡಿ ಅಣೆಕಟ್ಟುಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.
ಈ ಯೋಜನೆಗೆ ಸುಮಾರು 3976 ಕೋಟಿ ರೂ. ವೆಚ್ಚವಾಗಲಿದೆ. ಈ ಸಂಬಂಧ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾಪಕ್ಕೆ ಅನುಮೋದನೆ ದೊರೆಯುವ ನಿರೀಕ್ಷೆ ಇರುವುದಾಗಿಯೂ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಮುದ್ರ ಸೇರುವ ನೇತ್ರಾವತಿ ನದಿ ಮತ್ತು ಕರಾವಳಿ ಭಾಗದ ನದಿ, ತೊರೆಗಳ ನೀರನ್ನು ಈ ಭಾಗದ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಬಳಕೆ ಮಾಡಲು, ಅದನ್ನು ರೈತರ ಉಪಯೋಗಕ್ಕೆ ಪೂರಕವಾಗುವಂತೆ ಮಾಡಲು ಈ ದೊಡ್ಡ ಯೋಜನೆಯನ್ನು ಕೈಗೆತ್ತಿಕೊಂಡಿರುವುದಾಗಿ ತಿಳಿಸಿದ್ದಾರೆ.
ಅದರೊಂದಿಗೆ ಈಗಾಗಲೇ ನಿರ್ವಹಣೆಯ ಕೊರತೆಯನ್ನು ಎದುರಿಸುತ್ತಿರುವ ಕಿಂಡಿ ಅಣೆಕಟ್ಟುಗಳಿಗೆ ದುರಸ್ತಿಗಾಗಿ ಶೀಘ್ರದಲ್ಲೇ 4 ಕೋಟಿ ರೂ. ಗಳ ಅನುದಾನವನ್ನು ಹೊಂದಿಸಿ ಕೊಡುವ ಭರವಸೆಯನ್ನು ಮಾಧುಸ್ವಾಮಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.