ನವದೆಹಲಿ: ದೂರಸಂಪರ್ಕ ಇಲಾಖೆಯು ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಲ್ಯಾಂಡ್ಲೈನ್ ಫೋನ್ಗಳಿಂದ ಮೊಬೈಲ್ ಸಂಖ್ಯೆಗೆ ಕರೆ ಮಾಡುವಾಗ ಸಂಖ್ಯೆಯ ಮೊದಲು ʼ0ʼ ಸೇರಿಸುವುದು ಕಡ್ಡಾಯವಾಗಿದೆ. 2021 ರ ಜನವರಿ 1 ರಿಂದ ನಿಯಮ ಜಾರಿಗೆ ಬರಲಿದೆ.
ಟೆಲಿಕಾಂಗಳಿಗೆ ಸಾಕಷ್ಟು ಸಂಖ್ಯೆಗಳನ್ನು ರಚಿಸಲು ಅವಕಾಶ ನೀಡಲು ಸೆಕ್ಟರ್ ರೆಗ್ಯುಲೇಟರ್, ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್) ಶಿಫಾರಸು ಮಾಡಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಚಂದಾದಾರರು 0 ಸೇರಿಸದೆ ಮೊಬೈಲ್ ಕರೆಗೆ ಡಯಲ್ ಮಾಡಿದಾಗಲೆಲ್ಲಾ ಈ ಬಗೆಗಿನ ಪ್ರಕಟಣೆಯನ್ನು ನೀಡಲು ಸುತ್ತೋಲೆಯಲ್ಲಿ ಸೂಚಿಸಲಾಗಿದೆ.
ಫಿಕ್ಸ್ಡ್ ಲೈನ್ ಮತ್ತು ಮೊಬೈಲ್ ಸೇವೆಗಳಿಗೆ ಸಾಕಷ್ಟು ಸಂಖ್ಯಾ ಸಂಪನ್ಮೂಲಗಳನ್ನು ಖಚಿತಪಡಿಸಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.