ನವದೆಹಲಿ: ಜಗತ್ತಿನ ಅಗ್ರಗಣ್ಯ ಫುಟ್ಭಾಲ್ ಆಟಗಾರರಲ್ಲಿ ಒಬ್ಬರು ಎಂಬ ಕೀರ್ತಿಗೆ ಭಾಜನರಾಗಿದ್ದ ಡಿಯೋಗ್ ಮರಡೋನಾ ನಿನ್ನೆ ಇಹಲೋಕವನ್ನು ತ್ಯಜಿಸಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಕೆಲ ದಿನಗಳ ಹಿಂದೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆಗೆ ಅವರು ಒಳಗಾಗಿದ್ದರು. ತದನಂತರ ಆರೋಗ್ಯದಲ್ಲಿ ಏರುಪೇರಾಗಿತ್ತು ಎನ್ನಲಾಗಿದೆ. ಅರ್ಜೆಂಟೀನಾದ ಫುಟ್ಬಾಲ್ ಅಸೋಸಿಯೇಷನ್ ಅವರು ನಿಧನರಾದರು ಎಂದು ದೃಢಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ವಿಶ್ವ ನಾಯಕರು ಮರಡೋನಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಡಿಯಾಗೋ ಮರಡೋನಾ ಫುಟ್ಬಾಲ್ನ ಮೆಸ್ಟ್ರೋ ಆಗಿದ್ದು, ಅವರು ಜಾಗತಿಕ ಜನಪ್ರಿಯತೆಯನ್ನು ಹೊಂದಿದವರು. ಅವರ ವೃತ್ತಿಜೀವನದುದ್ದಕ್ಕೂ, ಫುಟ್ಬಾಲ್ ಮೈದಾನದಲ್ಲಿ ಕೆಲವು ಅತ್ಯುತ್ತಮ ಕ್ರೀಡಾ ಕ್ಷಣಗಳನ್ನು ನಮಗೆ ನೀಡಿದರು. ಅವರ ಅಕಾಲಿಕ ನಿಧನವು ನಮ್ಮೆಲ್ಲರನ್ನೂ ಶೋಕದಲ್ಲಿ ಮುಳುಗಿಸಿದೆ. ಅವರ ಆತ್ಮಕೆ ಶಾಂತಿ ಸಿಗಲಿ” ಎಂದಿದ್ದಾರೆ.
Diego Maradona was a maestro of football, who enjoyed global popularity. Throughout his career, he gave us some of the best sporting moments on the football field. His untimely demise has saddened us all. May his soul rest in peace.
— Narendra Modi (@narendramodi) November 26, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.