ಶ್ರೀನಗರ: ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರು ತಮ್ಮನ್ನು ಮತ್ತೆ ಬಂಧಿಸಲಾಗಿದೆ ಮತ್ತು ನನ್ನ ಮಗಳು ಇಲ್ಟಿಜಾ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ನವೀದ್ ಬಾಬು ಅವರನ್ನು ಒಳಗೊಂಡ ಭಯೋತ್ಪಾದಕ ಪ್ರಕರಣದಲ್ಲಿ ಸಂಬಂಧವಿದೆ ಎಂದು ಆರೋಪಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬುಧವಾರ ಬಂಧಿಸಿರುವ ಪಿಡಿಪಿ ಯುವ ವಿಭಾಗದ ಅಧ್ಯಕ್ಷ ವಹೀದ್ ಪರ್ರಾ ಅವರ ಕುಟುಂಬವನ್ನು ಭೇಟಿ ಮಾಡಲು ಕೂಡ ತನಗೆ ಅನುಮತಿಯನ್ನು ನೀಡಲಾಗಿಲ್ಲ ಎಂದಿದ್ದಾರೆ.
ವಹೀದ್ ಪರ್ರಾ ಮುಫ್ತಿ ಅವರ ಆಪ್ತನಾಗಿದ್ದ.
“ನನ್ನನ್ನು ಮತ್ತೊಮ್ಮೆ ಅಕ್ರಮವಾಗಿ ಬಂಧಿಸಲಾಗಿದೆ. ಎರಡು ದಿನಗಳಿಂದ, ಪುಲ್ವಾಮಾದ ವಾಹಿದ್ ಅವರ ಕುಟುಂಬವನ್ನು ಭೇಟಿ ಮಾಡಲು ನನಗೆ ನಿರಾಕರಿಸಿದ್ದಾರೆ”ಎಂದು ಮುಫ್ತಿ ಇಂದು ಬೆಳಿಗ್ಗೆ ಟ್ವೀಟ್ ಸರಣಿಯಲ್ಲಿ ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದಲ್ಲಿ ಪಿಡಿಪಿಯ ಪುನರುಜ್ಜೀವನದಲ್ಲಿ ವಹೀದ್ ಪರ್ರಾ ಪ್ರಮುಖ ಪಾತ್ರ ವಹಿಸಿದ್ದ, ವಿಶೇಷವಾಗಿ ಉಗ್ರಗಾಮಿ ಪೀಡಿತ ಪುಲ್ವಾಮಾದಲ್ಲಿ ಆತ ಸಕ್ರಿಯನಾಗಿದ್ದ. ಅಲ್ಲಿಂದ ಅವನು ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ. ಈ ಚುನಾವಣೆಯ ಮೊದಲ ಹಂತ ನವೆಂಬರ್ 28 ರಂದು ನಡೆಯಲಿದೆ. ಇದೀಗ ಈತ ಭಯೋತ್ಪಾದನಾ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.