ಉಡುಪಿ: ಗ್ರಾಮ ಪಂಚಾಯತ್ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಂಘಟನಾ ದೃಷ್ಟಿಯಿಂದ ಬಿಜೆಪಿ ಹಮ್ಮಿಕೊಂಡಿರುವ ‘ಗ್ರಾಮ ಸ್ವರಾಜ್ಯ ಸಮಾವೇಶ’ ಕೋಟೇಶ್ವರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನಸ್ನೇಹಿ, ಅಭಿವೃದ್ಧಿ ಪೂರಕ ಯೋಜನೆಗಳನ್ನು, ಆಶಯಗಳನ್ನು ರಾಜ್ಯದ ಮನೆ ಮನೆಗಳಿಗೆ ತಲುಪಿಸುವ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಈ ವಿನೂತನ ಕಾರ್ಯಕ್ರಮವನ್ನು ನಡೆಸುತ್ತಿದೆ.
ಇದೇ ವೇಳೆ ಮಣಿಪಾಲದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ನಳಿನ್, ಇತ್ತೀಚಿಗೆ ಹೆಚ್ಚಾಗಿ ಕೇಳಿ ಬರುತ್ತಿರುವ ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಠಿಣ ಕಾನೂನು ಜಾರಿಗೊಳಿಸುವ ಭರವಸೆಯನ್ನು ನೀಡಿದರು. ಅದರೊಂದಿಗೆ ಇಂದು ಮಂಗಳೂರಿನ ಕದ್ರಿ ಠಾಣೆಯ ಸಮೀಪ ರಾಷ್ಟ್ರ ವಿರೋಧಿ ಬರಹ ಪ್ರಕಟಿಸಿದವರು ಯಾರೇ ಆಗಿದ್ದರೂ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ಹಾಗೆಯೇ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ಬಿಜೆಪಿ ವರಿಷ್ಠರು ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೆಯೇ ಹಲವು ಸಚಿವರು ತಮ್ಮ ಇಲಾಖೆಯ ಯೋಜನೆಗಳ ಅಂಗೀಕಾರ, ಅನುದಾನ ಬಿಡುಗಡೆ ಮೊದಲಾದ ವಿಚಾರಗಳ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುತ್ತಿದ್ದಾರೆ. ಈ ಭೇಟಿಗೆ ಬೇರೆ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.