ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಆನ್ಲೈನ್ ತರಗತಿಯಿಂದ ಹೊರಗಿಡುವುದಾಗಿ ಕೆಲ ದಿನಗಳ ಹಿಂದಷ್ಟೇ ಖಾಸಗಿ ಶಾಲೆಗಳ ಒಕ್ಕೂಟ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ರಾಜ್ಯ ಶಿಕ್ಷಣ ಇಲಾಖೆ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆದೇಶದಂತೆ ಖಾಸಗಿ ಶಾಲೆಗಳ ಒಕ್ಕೂಟದ ಜೊತೆಗೆ ಸಭೆ ನಡೆಸಿದೆ.
ಈ ಕುರಿತಂತೆ ಮಾತನಾಡಿರುವ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬು ಕುಮಾರ್ ಅವರು, ಸದ್ಯಕ್ಕೆ ಆನ್ಲೈನ್ ತರಗತಿಗಳನ್ನು ಸ್ಥಗಿತ ಮಾಡುವುದಿಲ್ಲ. ಆನ್ಲೈನ್ ತರಗತಿಗಳನ್ನು ಮುಂದುವರೆಸುವ ಭರವಸೆಯನ್ನು ಸಭೆಯಲ್ಲಿ ಖಾಸಗಿ ಶಾಲೆಗಳ ಒಕ್ಕೂಟ ನೀಡಿದೆ. ಜೊತೆಗೆ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನೀ ಸಹ ಅವರು ಸಭೆಯಲ್ಲಿ ತಿಳಿಸಿದ್ದು, ಅವುಗಳನ್ನು ಬಗೆಹರಿಸಲು ಪೂರಕವಾಗುವಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಆನ್ಲೈನ್ ತರಗತಿಯನ್ನು ಸ್ಥಗಿತ ಮಾಡುವುದಿಲ್ಲ. ಆದರೆ ಶಿಕ್ಷಕರಿಗೆ ವೇತನ ಪಾವತಿಸುವುದು, ಸ್ಕೂಲ್ ಬಸ್ ವ್ಯವಸ್ಥೆ ಮೊದಲಾದ ಆರ್ಥಿಕ ಸಮಸ್ಯೆಗಳನ್ನು ಶಾಲೆಗಳು ಅನುಭವಿಸುವಂತಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ಕ್ರಮಗಳ ಮೂಲಕ ಸಮಸ್ಯೆ ಬಗೆ ಹರಿಸುವಂತೆಯೂ ಒಕ್ಕೂಟ ಮನವಿ ಸಲ್ಲಿಸಿದೆ. ಖಾಸಗಿ ಶಾಲೆಗಳ ಒಕ್ಕೂಟ ನೀಡಿರುವ ಮನವಿಯನ್ನು ಶಿಕ್ಷಣ ಸಚಿವರ ಗಮನಕ್ಕೆ ತರಲಾಗುವುದು ಎಂದು ಅನ್ಬು ಕುಮಾರ್ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.