ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಮೊದಲ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆ ಮತ್ತು ಪಂಚಾಯತ್ ಉಪಚುನಾವಣೆ ನಡೆಯುತ್ತಿದೆ. ಇಂದು ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಪ್ರಾರಂಭವಾಗಿದೆ. ಮಧ್ಯಾಹ್ನ 2 ರವರೆಗೆ ಮತದಾನ ಮುಂದುವರಿಯಲಿದೆ. ಚುನಾವಣೆಯನ್ನು ಎಂಟು ಹಂತಗಳಲ್ಲಿ ನಡೆಸಲಾಗುತ್ತಿದೆ.
ಮತದಾನ ಸುಗಮವಾಗಿ ನಡೆಯುವಂತೆ ಭಾರೀ ವ್ಯವಸ್ಥೆ ಮಾಡಲಾಗಿದೆ. ಇಂದಿನ 43 ಕ್ಷೇತ್ರಗಳ ಡಿಡಿಸಿ ಚುನಾವಣೆಗೆ ಒಟ್ಟು 296 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಅಲ್ಲದೆ, ಇಂದು 94 ಕ್ಷೇತ್ರಗಳಲ್ಲಿ ಸರಪಂಚ್ ಚುನಾವಣೆ ನಡೆಸಲಾಗುತ್ತಿದ್ದು, ಈ ಹಂತದಲ್ಲಿ 279 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
ಅಂತೆಯೇ, 368 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿರುವ ಪಂಚಾಯತ್ ಉಪಚುನಾವಣೆಯಲ್ಲಿ 852 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. 36 ಸರಪಂಚರುಗಳು ಸೇರಿದಂತೆ 768 ಪಂಚ್ಗಳನ್ನು ಈಗಾಗಲೇ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಈ ನಡುವೆ, ಮತದಾನ ಮಾಡುವ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದು ಮತ್ತು ಮುಖಗವಸುಗಳನ್ನು ಬಳಸುವುದನ್ನು ಮರೆಯದಂತೆ ಜನರಿಗೆ ರಾಜ್ಯ ಚುನಾವಣಾ ಆಯುಕ್ತ (ಎಸ್ಇಸಿ) ಕೆ.ಕೆ.ಶರ್ಮಾ ಕೋರಿದ್ದಾರೆ.
ಜನರು ಪ್ರಜಾಪ್ರಭುತ್ವದ ಅತಿದೊಡ್ಡ ಉತ್ಸವದಲ್ಲಿ ಭಾಗವಹಿಸಬೇಕು ಮತ್ತು ತಮ್ಮ ಅಮೂಲ್ಯವಾದ ಮತ ಚಲಾಯಿಸಲು ಮುಂದೆ ಬರಬೇಕೆಂದು ಶರ್ಮಾ ಜಮ್ಮು ಮತ್ತು ಕಾಶ್ಮೀರದ ಜನರಿಗೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.