ಬೆಂಗಳೂರು: ಗ್ರಾಮಗಳನ್ನು ದತ್ತು ಸ್ವೀಕಾರ ಮಾಡುವತ್ತ ಕೃಷಿ ವಿಶ್ವ ವಿದ್ಯಾಲಯಗಳು ಗಮನ ಹರಿಸಬೇಕಾಗಿದೆ ಎಂದು ಕೃಷಿ ಸಚಿವ, ಕೃಷಿ ವಿವಿಯ ಸಹ ಕುಲಾಧಿಪತಿ ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಅವರು ಕೃಷಿ ವಿವಿ ಯ 54 ನೇ ಘಟಿಕೋತ್ಸವದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ಡಿ ಪಡೆದವರಿಗೆ ಪದವಿ ಪ್ರದಾನಿಸಿ ಮಾತನಾಡಿರು. ರಾಜ್ಯದಲ್ಲಿ ಆರು ಕೃಷಿ ವಿವಿಗಳಿವೆ. ಈ ವಿವಿಗಳು ಪ್ರತಿ ವರ್ಷ ನಾಲ್ಕು ಹಳ್ಳಿಗಳನ್ನಾದರೂ ದತ್ತು ಪಡೆದು ಅಲ್ಲಿನ ಕೃಷಿ ಕೆಲಸಗಳನ್ನು ಅಭಿವೃದ್ಧಿ ಮಾಡಬೇಕು. ಕೃಷಿ ಪರಂಪರೆಯನ್ನು ಉಳಿಸುವತ್ತ ಚಿತ್ತ ಹರಿಸಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆ ಮೂಲಕ ಮಾದರಿಯಾಗಬೇಕು ಎಂದು ಅವರು ತಿಳಿಸಿದ್ದಾರೆ.
ರಾಜ್ಯದ ಕೃಷಿ ಇಲಾಖೆಯ ವೃಂದ ನೇಮಕಾತಿ ನಿಯಮಾವಳಿಗಳು ಕಳೆದ ಇಪ್ಪತ್ತು ವರ್ಷಗಳಿಂದ ತಿದ್ದುಪಡಿಯಾಗಿಲ್ಲ. ಇತ್ತೀಚೆಗಷ್ಟೇ ಅದನ್ನು ತಿದ್ದುಪಡಿ ಮಾಡುವತ್ತ ಗಮನ ಹರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇನ್ನು ಆಹಾರ ಮತ್ತು ಕೃಷಿ ಎಂಜಿನಿಯರಿಂಗ್ ವಿಷಯಗಳಲ್ಲಿ ಪದವಿ ಪಡೆದವರಿಗೆ 15% ಹುದ್ದೆಗಳನ್ನು ಮೀಸಲಿಡಲಾಗಿದೆ. ಕೃಷಿ ವಿಚಾರದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಪಿಎಚ್ಡಿ ಪಡೆದವರು ಕೃಷಿ ನವೋದ್ಯಮಿಗಳಾಗಿ ಹೊರಹೊಮ್ಮುವಂತಾಗಬೇಕು ಎಂದು ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.