ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಜೀವ ಪಣಕ್ಕಿಟ್ಟು ರೋಗಿಗಳ ಶುಶ್ರೂಷೆ ಮಾಡಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಡಿ. 1 ರಿಂದ ತರಗತಿಗಳು ಆರಂಭವಾಗಲಿದೆ ಎಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯದ ಮೆಡಿಕಲ್ ಮತ್ತು ಡೆಂಟಲ್ ಕಾಲೇಜುಗಳನ್ನು ಡಿ. 1 ರಿಂದ ಆರಂಭ ಮಾಡುವಂತೆ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೋನಾ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಲೇಜುಗಳನ್ನು ಆರಂಭಿಸಲು ಸೂಚಿಸಿಲಾಗಿದೆ. ಈ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿಯ ಸಿಬ್ಬಂದಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ಕಠಿಣ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದೆ.
ಹಾಗೆಯೇ ಕೊರೋನಾ ಸಂಕಷ್ಟಕ್ಕೆ ಒಂದು ಪರಿಹಾರ ದೊರೆಯುವವರೆಗೆ ಯಾವುದೇ ಮೆಡಿಕಲ್ ಕಾಲೇಜುಗಳು ಸೆಮಿನಾರ್, ಕಾನ್ಫರೆನ್ಸ್, ಇಂಟರ್ವ್ಯೂ ಮೊದಲಾದವುಗಳನ್ನು ನಡೆಸದಂತೆಯೂ ಸರ್ಕಾರ ಸೂಚಿಸಿದೆ. ಹಾಗೆಯೇ ಗರ್ಭಿಣಿಯರು, ವಯಸ್ಸಾದ ಸಿಬ್ಬಂದಿಗಳನ್ನು ಕಾಲೇಜಿನ ಅಥವಾ ಆಸ್ಪತ್ರೆಗಳ ಸೇವಾ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜನೆ ಮಾಡದಂತೆ ಸರ್ಕಾರ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.