ಜಮ್ಮು: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ, ಬುಧವಾರ ಬಿಎಸ್ಎಫ್ ಪಡೆಯ ಮೇಲೆ ಉಗ್ರರ ದಾಳಿ ನಡೆದಿದ್ದು, ಇಬ್ಬರು ಯೋಧರು ಮೃತರಾಗಿದ್ದಾರೆ. ಒರ್ವ ಉಗ್ರನನ್ನು ಹೊಡೆದುರುಳಿಸಲಾಗಿದೆ.
ಉಧಮ್ಪುರದಿಂದ 10 ಕಿ.ಮೀ ದೂರದಲ್ಲಿರುವ ಸಂನ್ರುಲಿಯಲ್ಲಿ ಈ ಘಟನೆ ನಡೆದಿದೆ. ಉಗ್ರರು ಬಿಎಸ್ಎಫ್ ಪಡೆಯ ಮೇಲೆ ಗ್ರೆನೇಡ್ ಮೂಲ ದಾಳಿ ನಡೆಸಿದ್ದಾರೆ, ಇದರಿಂದಾಗಿ ಆರು ಯೋಧರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ದಾಳಿ ನಡೆಸಿರುವ ಉಗ್ರರು ಉಧಮ್ಪುರದ ನರ್ಸೊ ನಲ್ಲಾಹ ಸಮೀಪ ಮೂರು ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡಿದ್ದರು ಎನ್ನಲಾಗಿದೆ, ಈ ಪ್ರದೇಶದ ಸುತ್ತಲೂ ಪೊಲೀಸರು ಮತ್ತು ಸಿಆರ್ಪಿಎಫ್ ಯೋಧರು ಜಂಟಿಯಾಗಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದೀಗ ಹೆಚ್ಚುವರಿ ಪಡೆಗಳನ್ನು ಮುಂಜಾಗೃತ ಕ್ರಮವಾಗಿ ಉಧಮ್ಪುರಕ್ಕೆ ಕಳುಹಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.