ವಾರಣಾಸಿ: ದೇವ್ ದೀಪಾವಳಿ ಆಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಕ್ಷೇತ್ರ ವಾರಣಾಸಿಗೆ ಆಗಮಿಸಿದ್ದಾರೆ. ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ವಾರಣಾಸಿಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ವಾರಣಾಸಿಯಲ್ಲಿ ನಿರ್ಮಾಣ ಮಾಡಲಾಗಿರುವ ಆರು ಲೇನ್ಗಳ ನೂತನ ರಾಷ್ಟ್ರೀಯ ಹೆದ್ದಾರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಮಾತನಾಡಿದ ಮೋದಿ, ನೂತನ ಕೃಷಿ ಕಾನೂನುಗಳಿಂದ ರೈತರಿಗೆ ಯಾವುದೇ ರೀತಿಯ ಅನಾನುಕೂಲ, ತೊಂದರೆ ಸಂಭವಿಸುವುದಿಲ್ಲ. ಬದಲಾಗಿ ಇದರಿಂದಾಗಿ ರೈತರಿಗೆ ಹೆಚ್ಚಿನ ಲಾಭವಾಗಲಿದೆ. ಆದರೆ ಈ ಕೃಷಿ ಕಾಯ್ದೆಗಳ ವಿರುದ್ಧ ರೈತರಿಗೆ ವಿರೋಧ ಪಕ್ಷಗಳು ತಪ್ಪು ಮಾಹಿತಿ ನೀಡುತ್ತಿವೆ ಎಂದು ಮೋದಿ ತಿಳಿಸಿದರು.
ರೈತರ ಅಭಿವೃದ್ಧಿಯ ಆಶಯ ಹೊಂದಿರುವ ಕೇಂದ್ರ ಸರ್ಕಾರ ಅವರಿಗೆ ಎಲ್ಲಾ ರೀತಿಯ ಅನುಕೂಲಗಳನ್ನು ಕಲ್ಪಿಸಲಿದೆ. ಮಧ್ಯವರ್ತಿಗಳ ಹಾವಳಿಯಿಂದ ರೈತರನ್ನು ರಕ್ಷಿಸಿ ಅವರಿಗೆ ಹೆಚ್ಚಿನ ಲಾಭಾಂಶವನ್ನು ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಈ ಕಾಯ್ದೆ ಜಾರಿಗೆ ತರಲಾಗಿದೆ. ನೇರವಾಗಿ ಮಾರುಕಟ್ಟೆಯಲ್ಲಿ ರೈತನೇ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುವ ಅವಕಾಶ ನೀಡಲಾಗಿದೆ. ಈ ಎಲ್ಲಾ ವಿಚಾರಗಳನ್ನು ರೈತರಿಗೆ ತಲುಪಿಸುವ ಕೆಲಸವಾಗಬೇಕಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.