ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿನಿಂದ 45,333 ರೋಗಿಗಳು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ಚೇತರಿಕೆಯ ಪ್ರಮಾಣ 93 81% ಗಳಷ್ಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಆ ಮೂಲಕ ಈವರೆಗೆ ದೇಶದಲ್ಲಿ 88 ಲಕ್ಷದ 47 ಸಾವಿರ ಮಂದಿ ಕೊರೋನಾ ಸೋಂಕಿತರು ಚೇತರಿಸಿಕೊಂಡಂತಾಗಿದೆ. ಸದ್ಯ ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,46,952 ರಷ್ಟಾಗಿದೆ. ಕಳೆದ 24 ಗಂಟೆಗಳಲ್ಲಿ ಸುಮಾರು 38, 772 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಆ ಮುಖಾಂತರ ಈ ವರೆಗೆ ಒಟ್ಟು 94,31,000ಗಳಷ್ಟು ಜನರಿಗೆ ಸೋಂಕು ತಗುಲಿದಂತಾಗಿದೆ ಎಂದು ಸಚಿವಾಲಯವು ವರದಿಯಲ್ಲಿ ತಿಳಿಸಿದೆ.
ದೇಶದಲ್ಲಿ ಪರಿಣಾಮಕಾರಿಯಾಗಿ ಕೊರೋನಾ ಸೋಂಕು ಪರೀಕ್ಷೆ, ಚಿಕಿತ್ಸೆಗೆ ಕೇಂದ್ರ, ರಾಜ್ಯ ಸರ್ಕಾರಗಳು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ನಿಯಂತ್ರಣ, ಚೇತರಿಕೆಯ ಪ್ರಮಾಣ ಹೆಚ್ಚಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಸದ್ಯ 1.45% ಸಾವಿನ ಪ್ರಮಾಣವಿದ್ದರೆ, ಕಳೆದ 24 ಗಂಟೆಗಳಲ್ಲಿ 8 ಲಕ್ಷದ 76 ಸಾವಿರ ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಈ ವರೆಗೆ ದೇಶದಲ್ಲಿ ಒಟ್ಟು 14 ಕೋಟಿ 3 ಲಕ್ಷಕ್ಕೂ ಅಧಿಕ ಜನರಿಗೆ ಕೊರೋನಾ ಮಾದರಿ ಪರೀಕ್ಷೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ವರದಿಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.