ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಸಿಸಿ) ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು, ಬಿಗಿ ಭದ್ರತೆಯ ನಡುವೆ ಮತದಾನ ಪ್ರಕ್ರಿಯೆ ಆರಂಭವಾಗಿದೆ.
ಬೆಳಗ್ಗಿನಿಂದಲೇ ಮತದಾರರು ಮತಗಟ್ಟೆಗಳ ಬಳಿಗೆ ಬಂದು ತಮ್ಮ ಹಕ್ಕನ್ನು ಚಲಾವಣೆ ಮಾಡುವ ಮೂಲಕ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು ಬಿರುಸಿನ ಮತದಾನ ನಡೆಯುವ ಸಾಧ್ಯತೆಗಳಿರುವುದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎರಡನೇ ಹಂತದ ಮತದಾನ ಇದಾಗಿದ್ದು, ಈ ಹಂತದಲ್ಲಿ 321 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು 7 ಲಕ್ಷದ 90 ಸಾವಿರ ಮತದಾರರಿದ್ದು, 2,142 ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. 280 ಕ್ಷೇತ್ರಗಳ ಪೈಕಿ 43 ಕ್ಷೇತ್ರಗಳಲ್ಲಿ ಈ ಚುನಾವಣೆ ನಡೆಯುತ್ತಿದೆ. 18 ಕ್ಷೇತ್ರಗಳು ಜಮ್ಮುವಿಗೆ ಸಂಬಂಧಿಸಿದ್ದಾಗಿದ್ದರೆ ಉಳಿದ 25 ಕ್ಷೇತ್ರಗಳು ಕಾಶ್ಮೀರಕ್ಕೆ ಸಂಬಂಧಿಸಿದಂತಿವೆ. 8 ಸರ್ಪಂಚ್ ಕ್ಷೇತ್ರಗಳಿಗೂ ಚುನಾವಣೆ ನಡೆಯುತ್ತಿದೆ. 223 ಅಭ್ಯರ್ಥಿಗಳು ತಮ್ಮ ರಾಜಕೀಯ ಹಣೆಬರಹ ಪರೀಕ್ಷೆ ನಡೆಸುತ್ತಿದ್ದಾರೆ. ಕಣದಲ್ಲಿ 700 ಕ್ಕೂ ಹೆಚ್ಚು ಅಭ್ಯರ್ಥಿಗಳಿದ್ದಾರೆ. 1300 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳು ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಈ ಮತಗಟ್ಟಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.