
ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ತಮ್ಮ 60 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ತಿಳಿಸಿದ್ದಾರೆ.
ಜೆ. ಪಿ. ನಡ್ಡಾ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿದ್ದು, ನಡ್ಡಾ ಅವರ ಚುರುಕು ಮತ್ತು ಪ್ರೇರಣಾದಾಯಿ ವ್ಯಕ್ತಿತ್ವ, ನಾಯಕತ್ವದಲ್ಲಿ ಕೇಸರಿ ಪಕ್ಷವು ಮತ್ತಷ್ಟು ಎತ್ತರಕ್ಕೆ ಏರುತ್ತಿದೆ. ಅವರು ಆಯುರಾರೋಗ್ಯದ ಜೊತೆಗೆ ಸುಧೀರ್ಘ ಜೀವನ ನಡೆಸುವಂತಾಗಲಿ. ಅವರಿಗೆ ಜನ್ಮ ದಿನದ ಶುಭಾಶಯಗಳು ಎಂದು ತಿಳಿಸಿದ್ದಾರೆ.
भाजपा के राष्ट्रीय अध्यक्ष जेपी नड्डा जी को जन्मदिन की ढेरों बधाई। उनके कुशल और प्रेरक नेतृत्व में पार्टी निरंतर नई ऊंचाइयों को छू रही है। मेरी कामना है कि वे सदा स्वस्थ रहें और दीर्घायु हों। @JPNadda
— Narendra Modi (@narendramodi) December 2, 2020
ನಡ್ಡಾ ಅವರಿಗೆ ಶುಭಾಶಯ ಕೋರಿ ಗೃಹ ಸಚಿವ ಅಮಿತ್ ಶಾ ಅವರೂ ಟ್ವೀಟ್ ಮಾಡಿದ್ದು, ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರಿಗೆ ಜನುಮ ದಿನದ ಶುಭಾಶಯಗಳು. ನಿಮ್ಮ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಸಶಕ್ತವಾಗಿದೆ. ನಿಮಗೆ ಸ್ವಾಸ್ಥ್ಯಪೂರ್ಣ ಜೀವನ ನಡೆಸುವ ಅನುಗ್ರಹ ಮಾಡುವಂತೆ ಈಶ್ವರನಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.
भारतीय जनता पार्टी के माननीय राष्ट्रीय अध्यक्ष श्री @JPNadda जी को जन्मदिन की हृदयपूर्वक शुभकामनाएँ। आपके नेतृत्व में पार्टी निरंतर सशक्त होकर आगे बढ़ रही है। मैं ईश्वर से आपके स्वास्थ्यपूर्ण जीवन व दीर्घायु की कामना करता हूँ ।
— Amit Shah (@AmitShah) December 2, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


