
ಬೆಳಗಾವಿ: ನ್ಯಾಷನಲ್ ಡಿಫೆನ್ಸ್ ಅಕಾಡೆಮಿ (ಎನ್ಡಿಎ) ಮಾದರಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲು ಬೆಳಗಾವಿಯಲ್ಲಿ ಅಕಾಡೆಮಿಯೊಂದನ್ನು ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಈ ಅಕಾಡೆಮಿಯಲ್ಲಿ ತರಬೇತಿ ನೀಡಲು ಅಗತ್ಯವಾದಂತೆ ಪಠ್ಯಕ್ರಮಗಳನ್ನು ಅಳವಡಿಸಲು ಅಧಿಕಾರಿಗಳ ಜೊತೆಗೇ ಚರ್ಚೆ ನಡೆಸಿ ಯೋಜನೆ ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ನಗರದಲ್ಲಿ ಅನೇಕ ರಕ್ಷಣಾ ಸಂಸ್ಥೆಗಳಿವೆ. ಇಲ್ಲಿರುವ ಮಾನವ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಬೆಳಗಾವಿಯಲ್ಲೇ ಎನ್ಡಿಎ ಮಾದರಿಯ ಅಕಾಡೆಮಿ ಆರಂಭಕ್ಕೆ ಚಿಂತನೆ ನಡೆಸಿರುವುದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ಆರು ತಿಂಗಳೊಳಗೆ ಈ ಅಕಾಡೆಮಿ ಆರಂಭಕ್ಕೆ ಕ್ರಮ ಕೈಗೊಳ್ಳುವುದಾಗಿಯೂ ಗೃಹ ಸಚಿವರು ಮಾಹಿತಿ ನೀಡಿದ್ದಾರೆ.
ಪೊಲೀಸ್ ಇಲಾಖೆಗೆ ಸೇರುವ ಸಿಬ್ಬಂದಿಗಳಿಗೆ ಪ್ರಾಥಮಿಕ ತರಬೇತಿ ನೀಡಲಾಗುತ್ತಿದೆ. ಐಪಿಎಸ್ ಅಧಿಕಾರಿಗಳಿಗೂ ತರಬೇತಿ ನೀಡಲಾಗಿರುತ್ತದೆ. ಆದರೆ ಮಧ್ಯಮ ಹಂತದ ಅಧಿಕಾರಿಗಳು ತರಬೇತಿ ಪಡೆದು ಬಹಳ ವರ್ಷಗಳೇ ಆಗಿರುತ್ತವೆ. ಅಂತಹವರ ಕೌಶಲ್ಯ ವೃದ್ಧಿಯ ಅಗತ್ಯತೆಯನ್ನು ಪೂರೈಸಲು ಈ ಅಕಾಡೆಮಿ ಪೂರಕವಾಗಿರಲಿದೆ. ಮಿಲಿಟರಿ ಅಧಿಕಾರಿಗಳ ಮಾದರಿಯಲ್ಲಿಯೇ ಅವರನ್ನು ತಯಾರು ಮಾಡಲು ಈ ಅಕಾಡೆಮಿ ನೆರವಾಗುತ್ತದೆ ಎಂದು ಬೊಮ್ಮಾಯಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


