ಬೆಂಗಳೂರು: ಬಿಡದಿಯಲ್ಲಿ ಸ್ಥಾಪಿಸಲು ನಿರ್ಧರಿಸಿರುವ ರಾಜ್ಯದ ಮೊದಲ ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ವರ್ಚುವಲ್ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿಲಾನ್ಯಾಸ ನೆರವೇರಿಸಿದರು.
ಹೆಚ್ಚು ತೀವ್ರ ಗತಿಯಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ 5000 ಮೆಟ್ರಿಕ್ ಟನ್ಗಳಷ್ಟು ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದನ್ನು ವೈಜ್ಞಾನಿಕ ರೀತಿಯಲ್ಲಿ ನಿರ್ವಹಣೆ, ವಿಲೇವಾರಿ ಮಾಡಲು ತ್ಯಾಜ್ಯ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪನೆಗೆ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಘಟಕದಲ್ಲಿ ದಿನಕ್ಕೆ 600 ಟನ್ ಸಂಸ್ಕರಿತ ತ್ಯಾಜ್ಯ ಬಳಸಿ 11.5 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯ ಗುರಿ ಹೊಂದಲಾಗಿದೆ. ಇದನ್ನು 260 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.
ಕರ್ನಾಟಕ ವಿದ್ಯುತ್ ನಿಗಮ ಮತ್ತು ಬಿಬಿಎಂಪಿ ಈ ಯೋಜನೆಗೆ 130 ಕೋಟಿ ರೂ. ಗಳನ್ನು ಭರಿಸಲಿದ್ದಾರೆ. ಮುಂದಿನ 2 ವರ್ಷಗಳಲ್ಲಿ ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ಈ ಘಟಕದಲ್ಲಿ ಬೆಂಗಳೂರಿನ 25% ರಷ್ಟು ಮಿಶ್ರ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುವುದು ಎಂದು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.