ಬೆಂಗಳೂರು: ಈ ವರ್ಷದ ಎಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ದೇಶದ ಇತರ ರಾಜ್ಯಗಳಿಗಿಂತ ಹೆಚ್ಚಿನ ವಿದೇಶಿ ನೇರ ಹೂಡಿಕೆಯನ್ನು ಸೆಳೆಯುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಅವರು ತಮ್ಮ ಗೃಹ ಕಛೇರಿ ಕೃಷ್ಣಾದಲ್ಲಿ ನಾನಾ ದೇಶಗಳ ಕಾನ್ಸುಲರ್ ಜನರಲ್ಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸುಮಾರು 10 ಸಾವಿರ ಕೋಟಿ ವಿದೇಶಿ ನೇರ ಹೂಡಿಕೆಯನ್ನು ರಾಜ್ಯ ಸೆಳೆದಿದೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ. ಹಾಗೆಯೇ ಹೂಡಿಕೆಗಳನ್ನು ಮಾಡಲು ಕರ್ನಾಟಕ ಯಾಕೆ ಮತ್ತು ಹೇಗೆ ಸೂಕ್ತ, ಹೂಡಿಕೆದಾರರ ಅನುಕೂಲಕ್ಕೆ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು ಎಂಬುದರ ಕುರಿತಂತೆಯೂ ಮನವರಿಕೆ ಮಾಡಿ ಕೊಟ್ಟಿದ್ದಾರೆ.
ಅದರೊಂದಿಗೆ ರಾಜ್ಯದಲ್ಲಿ ಯಾವೆಲ್ಲ ಕ್ಷೇತ್ರದಲ್ಲಿ ಹೂಡಿಕೆ ಮಾಡುವುದಕ್ಕೆ ಅವಕಾಶಗಳಿವೆ ಎಂಬುದರ ಕುರಿತಾಗಿಯೂ ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ. ಹೂಡಿಕೆದಾರರನ್ನು ಗಮನದಲ್ಲಿಟ್ಟುಕೊಂಡು ತರಲಾದ ಸುಧಾರಣಾ ನೀತಿಗಳ ಬಗ್ಗೆಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಕೈಗಾರಿಕಾ ಕಾರಿಡಾರ್ಗಳ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ತೆಗೆದುಕೊಂಡಿರುವ ಕ್ರಮ, ತುಮಕೂರಿನಲ್ಲಿ ಅತಿ ದೊಡ್ಡ ಕೈಗಾರಿಕಾ ಟೌನ್ಶಿಫ್ ನಿರ್ಮಾಣ, ಎರಡನೇ ಹಂತದ ನಗರಗಳಲ್ಲೂ ಕೈಗಾರಿಕೆಗಳಿಗೆ, ಹೂಡಿಕೆಗೆ ಇರುವ ಅವಕಾಶಗಳ ಬಗ್ಗೆಯೂ ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ವಿವರಣೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.