ಮಂಗಳೂರು: ಉಳ್ಳಾಲದಲ್ಲಿ ಸಂಭವಿಸಿದ್ದ ಮೀನುಗಾರಿಕಾ ದೋಣಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ತಲಾ 6 ಲಕ್ಷ ರೂ. ಗಳ ಪರಿಹಾರ ಮೊತ್ತದ ಮಂಜೂರಾತಿಯನ್ನು ವಿತರಿಸಿದರು.
ಉಪ ಆಯುಕ್ತರ ಕಚೇರಿಯಲ್ಲಿ ಪರಿಹಾರ ಮಂಜೂರಾತಿ ಆದೇಶದ ನಕಲು ಪ್ರತಿಗಳನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರ ಮಾಡಿದರು. ಮೀನುಗಾರಿಕಾ ಇಲಾಖೆಯಿಂದ ತಲಾ 6 ಲಕ್ಷ ರೂ. ಗಳನ್ನು ಪರಿಹಾರವಾಗಿ ಒದಗಿಸಲಾಗಿದೆ. ಇಂದು ಸರ್ಕಾರಿ ರಜಾ ದಿನವಾಗಿರುವುದರಿಂದ ಡಿ. 4 ರಂದು ಈ ಹಣವನ್ನು ಸಂತ್ರಸ್ತರ ಕುಟುಂಬದವರ ಖಾತೆಗೆ ಜಮೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಮೃತರ ಕುಟುಂಬಗಳಿಗೆ ಹೆಚ್ಚುವರಿ 4 ಲಕ್ಷ ರೂ. ಗಳನ್ನು ಒದಗಿಸಿ ಕೊಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆಗೆ ಮಾತಕತೆ ನಡೆಸಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ. ಹಾಗೆಯೇ ಮೀನುಗಾರಿಕಾ ಇಲಾಖೆಯಲ್ಲಿ ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಸಂತ್ರಸ್ತ ಕುಟುಂಬಕ್ಕೆ ಒದಗಿಸಿಕೊಡುವ ಭರವಸೆಯನ್ನು ಅವರು ನೀಡಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.