ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಕನಕ ಜಯಂತಿಯ ಪ್ರಯುಕ್ತ ಕನಕಶ್ರೀ, ಕನಕ ಯುವ ಪುರಸ್ಕಾರ ಪ್ರದಾನ ಸಮಾರಂಭ ನಡೆಯಿತು.
ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕನಕದಾಸರು ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿದವರು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಆಶಯದ ಜೊತೆಗೆ ಬದುಕಿದವರು. ಅವರ ಆದರ್ಶಗಳ ಜೊತೆಗೆ ನಾವುಗಳು ಜೀವನ ಸಾಗಿಸಬೇಕಾಗಿದೆ ಎಂದು ನುಡಿದರು.
ಕನಕದಾಸರ ಜನ್ಮ ಸ್ಥಳವಾದ ಬಾಡ ವನ್ನು ಪ್ರವಾಸಿ ಕೇಂದ್ರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು. ಕನಕದಾಸರ ಸರ್ವೋದಯದ ಕನಸಿನಂತೆ ಸರ್ಕಾರವು ಸಹ ಸಮಾಜದ ಪ್ರತಿಯೊಬ್ಬರ ಏಳಿಗೆಯ ಆಶಯದ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಕಾರ್ಯಕ್ರಮದಲ್ಲಿ ಯುಗಧರ್ಮ ರಾಜಣ್ಣ, ಪ್ರೊ. ಶಿವರಾಮ ಶೆಟ್ಟಿ, ಡಾ. ಶಶಿಧರ ಜಿ ವೈದ್ಯ, ಡಾ. ಕಾತ್ಯಾಯಿನಿ ಕುಂಜಿಬೆಟ್ಟು, ಡಾ. ನರಸಿಂಹ ಮೂರ್ತಿ ಅವರಿಗೆ ಈ ಬಾರಿಯ ಕನಕಶ್ರೀ ಪ್ರಶಸ್ತಿ, ಕನಕ ಯುವ ಪುರಸ್ಕಾರ ಪ್ರದಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕನಕ ಪೀಠದ ಶ್ರೀ ಸಿದ್ಧರಾಮಾನಂದಪುರಿ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಮೊದಲಾದ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.