ಜಮ್ಮು: ಜಮ್ಮು ಮತ್ತು ಕಾಶ್ಮೀರದಲ್ಲಿ ಶುಕ್ರವಾರ ಬಿಗಿ ಭದ್ರತೆಯ ಮಧ್ಯೆ ಮೂರನೇ ಹಂತದ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಗೆ ಮತದಾನ ನಡೆಯುತ್ತಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯ ಮೂರನೇ ಹಂತದಲ್ಲಿ ಸ್ಪರ್ಧಿಸುವ 305 ಅಭ್ಯರ್ಥಿಗಳ ಭವಿಷ್ಯವನ್ನು ಒಟ್ಟು 7.37 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ.
ಡಿಡಿಸಿ ಚುನಾವಣೆ ಮತ್ತು ಪಂಚಾಯತ್ ಉಪಚುನಾವಣೆಗಳನ್ನು ನವೆಂಬರ್ 28 ರಿಂದ ಡಿಸೆಂಬರ್ 19 ರವರೆಗೆ ಎಂಟು ಹಂತಗಳಲ್ಲಿ ನಡೆಸಲಾಗುತ್ತಿದೆ. ಮತ ಎಣಿಕೆ ಡಿಸೆಂಬರ್ 22 ರಂದು ನಡೆಯಲಿದೆ.
ರಾಜ್ಯ ಚುನಾವಣಾ ಆಯುಕ್ತ (ಎಸ್ಇಸಿ) ಕೆ.ಕೆ.ಶರ್ಮಾ ಅವರ ಪ್ರಕಾರ, ಚುನಾವಣೆ ನಡೆಯುವ ಎಲ್ಲ ಕ್ಷೇತ್ರಗಳಲ್ಲಿ ಸಾಕಷ್ಟು ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಮತದಾನ ಕೇಂದ್ರಗಳಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್ ಮತ್ತು ಫೇಸ್ ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ.
ಡಿಡಿಸಿ ಚುನಾವಣೆಯ ಬಗ್ಗೆ ವಿವರಗಳನ್ನು ನೀಡಿದ ಶರ್ಮಾ, ಜಮ್ಮು-ಕಾಶ್ಮೀರದಲ್ಲಿ ಒಟ್ಟು 280 ಕ್ಷೇತ್ರಗಳಿವೆ, ಅದರಲ್ಲಿ 33 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ, ಇದರಲ್ಲಿ ಕಾಶ್ಮೀರ ವಿಭಾಗದ 16 ಮತ್ತು ಜಮ್ಮು ವಿಭಾಗದ 17 ಕ್ಷೇತ್ರಗಳು. ಬೆಳಿಗ್ಗೆ 7 ರಿಂದ ಮಧ್ಯಾಹ್ನ 2 ರವರೆಗೆ ಮತದಾನ ನಡೆಯಲಿದೆ.
ಒಟ್ಟಾರೆಯಾಗಿ ಡಿಡಿಸಿ ಚುನಾವಣೆಯಲ್ಲಿ ಕಾಶ್ಮೀರ ವಿಭಾಗದ 166 ಮತ್ತು ಜಮ್ಮು ವಿಭಾಗದ 139 ಸೇರಿದಂತೆ ಒಟ್ಟು 305 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಈ 305 ಅಭ್ಯರ್ಥಿಗಳಲ್ಲಿ 252 ಪುರುಷರು, 53 ಮಹಿಳೆಯರು. ಮೂರನೇ ಹಂತದ ಡಿಡಿಸಿ ಚುನಾವಣೆಯಲ್ಲಿ 7,37,648 ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಶರ್ಮಾ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.