ನವದೆಹಲಿ: ಇಂದು ಭಾರತೀಯ ನೌಕಾಪಡೆ ದಿನಾಚರಣೆ. 1971ರ ಭಾರತ-ಪಾಕಿಸ್ಥಾನ ಯುದ್ಧದ ಸಂದರ್ಭದಲ್ಲಿ ಡಿಸೆಂಬರ್ 4ರಂದು ಕರಾಚಿ ಬಂದರಿನ ಮೇಲೆ ಭಾರತೀಯ ನೌಕಾಪಡೆ ದಾಳಿ ನಡೆಸಿ ಶತ್ರುಗಳಿಗೆ ದಿಟ್ಟ ಸಂದೇಶವನ್ನು ರವಾನೆ ಮಾಡಿತ್ತು. ಇದರ ಸ್ಮರಣಾರ್ಥ ಪ್ರತಿವರ್ಷ ಡಿಸೆಂಬರ್ ನಾಲ್ಕರಂದು ನೌಕಾಪಡೆ ದಿನವನ್ನು ಆಚರಿಸಲಾಗುತ್ತದೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಮುದ್ರ ವಲಯವನ್ನು ಕಾಯುತ್ತಿರುವ ನೌಕಾಪಡೆಯ ವೀರರ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, “ನಮ್ಮ ನೌಕಾಪಡೆಯ ಎಲ್ಲಾ ವೀರ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ನೌಕಾಪಡೆಯ ದಿನದ ಶುಭಾಶಯಗಳು. ಭಾರತೀಯ ನೌಕಾಪಡೆಯು ನಮ್ಮ ಕರಾವಳಿಯನ್ನು ನಿರ್ಭಯವಾಗಿ ರಕ್ಷಿಸುತ್ತಿದೆ ಮತ್ತು ಅಗತ್ಯ ಸಮಯದಲ್ಲಿ ಮಾನವೀಯ ನೆರವು ನೀಡುತ್ತಿದೆ. ಶತಮಾನಗಳಿಂದದ ಭಾರತದ ಶ್ರೀಮಂತ ಕಡಲ ಪರಂಪರೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ” ಎಂದಿದ್ದಾರೆ.
ನೌಕಾಪಡೆಯ ಶೌರ್ಯ ವಿವರಿಸುವ ವಿಡಿಯೋ ತುಣುಕನ್ನೂ ಅವರು ಹಂಚಿಕೊಂಡಿದ್ದಾರೆ.
Navy Day greetings to all our valorous navy personnel and their families. The Indian navy fearlessly protects our coasts and also renders humanitarian assistance in times of need. We also remember India’s rich maritime tradition over centuries. pic.twitter.com/k2PMgvc0F3
— Narendra Modi (@narendramodi) December 4, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.